ಮಡಿಕೇರಿ, ಡಿ. ೨೫: ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸಂಘದ ವತಿಯಿಂದ ತಾ. ೨೬ ರಂದು (ಇಂದು) ಆನ್‌ಲೈನ್ ಮೂಲಕ ಹಳೆ ವಿದ್ಯಾರ್ಥಿಗಳ ಒಕ್ಕೂಟವನ್ನು ಆಯೋಜಿಸಲಾಗಿದೆ.
ಬೆಳಿಗ್ಗೆ ೧೦.೩೦ಕ್ಕೆ ನಡೆಯಲಿರುವ ಆನ್‌ಲೈನ್ ಕಾರ್ಯಕ್ರಮವನ್ನು ಸಿ.ಐ.ಟಿ.ಯ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೆ. ಅಪ್ಪಯ್ಯ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೊಡವ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಸಿ.ಪಿ. ಬೆಳ್ಳಿಯಪ್ಪ, ಉಪಾಧ್ಯಕ್ಷ ಡಾ. ಎಂ.ಸಿ. ಕಾರ್ಯಪ್ಪ, ಕಾರ್ಯದರ್ಶಿ ಸಿ.ಪಿ. ರಾಕೇಶ್ ಪೂವಯ್ಯ, ಸಿ.ಐ.ಟಿ. ಕಾಲೇಜಿನ ಪ್ರಾಂಶುಪಾಲ ಡಾ. ಎಂ. ಬಸವರಾಜ್ ಹಾಗೂ ಸಿ.ಐ.ಟಿ. ಬೋಧಕ, ಬೋಧಕೇತರ ವೃಂದವರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮವನ್ನು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥೆ ಡಾ. ಪಿ.ಸಿ. ಕವಿತ, ಸಿ.ಐ.ಟಿ. ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಹಾಗೂ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿAಗ್ ವಿಭಾಗದ ಸಹಾಯಕ ಬೋಧಕ ಕೆ.ಎಂ. ಕೀರ್ತನ್ ನಿರ್ವಹಿಸಲಿದ್ದು, Websiಣe: ತಿತಿತಿ.ಛಿiಣಛಿooಡಿg.eಜu.iಟಿ ನಲ್ಲಿ ಸಿ.ಐ.ಟಿ.ಯ ಹಳೆ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ.