ಮಡಿಕೇರಿ, ಡಿ. ೨೬: ನಗರದ ಶ್ರೀ ಓಂಕಾರೇಶ್ವರ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಇಂದು ಚಾಲನೆ ನೀಡಲಾಯಿತು. ಆಚಾರ್ಯ ವರ್ಣದ ಬಳಿಕ ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಪ್ರಾರ್ಥನೆ ನೆರವೇರಿತು. ಅ ನಂತರ ಮಹಾ ಸಂಕಲ್ಪ, ಪುಣ್ಯಾಹ, ಪ್ರಸಾದ ಶುದ್ಧಿ, ವಾಸ್ತು ರಕ್ಷೆÆÃಘ್ನ ಹೋಮ, ವಾಸ್ತು ಬಲಿ, ಅಂಕುರಾರ್ಪಣೆ ನಡೆಯಿತು. ತಾ.೨೭ ರಂದು (ಇಂದು) ಬೆಳಿಗ್ಗೆ ೬ ಗಂಟೆಯಿAದ ಗಣಪತಿ ಹೋಮ, ಬಿಂಬ ಶುದ್ಧಿ, ಕಲಶ ಪೂಜೆ (ಚತುಃಶುದ್ಧಿ, ಪಂಚಕ ಧಾರೆ), ಬಿಂಬ ಶುದ್ಧಿ ಕಲಶಾಭಿಷೇಕ, ಅಂಕುರ ಪೂಜೆ, ಪ್ರೋಕ್ತ ಹೋಮ, ಪ್ರಾಯಶ್ಚಿತ ಹೋಮ, ಹೋಮ ಕಲಶಾಭಿಷೇಕಗಳು, ಸಂಜೆ ೭ ಗಂಟೆಗೆ ದುರ್ಗಾಪೂಜೆ, ಅಂಕುರ ಪೂಜೆ ನೆರವೇರಲಿದೆ.ಈ ಸಂದರ್ಭ ಸಮಿತಿ ಅಧ್ಯಕ್ಷ ಪುಲಿಯಂಡ ಜಗದೀಶ್, ಮಾಜಿ ಅಧ್ಯಕ್ಷ ಕೆ.ಎಸ್. ದೇವಯ್ಯ ಹಾಗೂ ಸಮಿತಿ ಸದಸ್ಯರುಗಳು ಹಾಜರಿದ್ದರು.