ಕುಶಾಲನಗರ, ಡಿ. ೨೬: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣ ವಾಗುತ್ತಿರುವ ರಸ್ತೆ ಡಾಂಬರೀಕರಣ ಸಂಪೂರ್ಣ ಕಳಪೆಯಿಂದ ಕೂಡಿದೆ ಎಂದು ಆರೋಪಿಸಿ ಸ್ಥಳೀಯರು ಮತ್ತು ಸಂಘಟನೆಗಳ ಪ್ರಮುಖರು ಪ್ರತಿಭಟನೆ ನಡೆಸಿ ರಸ್ತೆ ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ಹೊಸಕೋಟೆ ಸಮೀಪ ನಡೆದಿದೆ.
ರಾಷ್ಟಿçÃಯ ಹೆದ್ದಾರಿಯಿಂದ ಕಲ್ಲೂರು ಕಡೆಗೆ ತೆರಳುವ ೬ ಕಿಮೀ ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿದ್ದು ಈ ಬಗ್ಗೆ ಸಂಬAಧಿಸಿದ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಕ್ರಮಕೈಗೊಳ್ಳದ ಹಿನ್ನಲೆಯಲ್ಲಿ ಸಾರ್ವಜನಿಕರು ಕಾಮಗಾರಿಯನ್ನು ಸ್ಥಗಿತಗೊಳಿಸಿ ಅಧಿಕಾರಿಗಳು ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿದರು.
ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ ಅಧಿಕಾರಿ ಕಾಮಗಾರಿಯನ್ನು ಗಮನಿಸಿ ಕಳಪೆಯಾಗಿರುವ ಬಗ್ಗೆ ಒಪ್ಪಿಕೊಂಡು ಗುತ್ತಿಗೆದಾರರಿಗೆ ನೋಟೀಸ್ ನೀಡುವುದಾಗಿ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆ ಹಿಂತೆಗೆದುಕೊAಡರು.
ಉತ್ತಮ ಗುಣಮಟ್ಟದಲ್ಲಿ ಕಾಮಗಾರಿ ನಡೆಸಲು ಕ್ರಮ ಕೈಗೊಳ್ಳುವುದಾಗಿ ಅವರು ಭರವಸೆ