ಮಡಿಕೇರಿ, ಡಿ. ೨೬: ಮಡಿಕೇರಿ ಕೊಡವ ಸಮಾಜದ ಕಲ್ಚರಲ್ ಮತ್ತು ವೆಲ್‌ಫೇರ್ ಅಸೋಸಿಯೇಷನ್‌ನ ವಾರ್ಷಿಕ ಮಹಾಸಭೆ ಇತ್ತೀಚೆಗೆ ನಡೆಯಿತು. ಕೊಡವ ಸಮಾಜದ ಸಭಾಂಗಣದಲ್ಲಿ ಸಂಸ್ಥೆಯ ಅಧ್ಯಕ್ಷ ಮೂವೇರ ಶಂಭು ಸುಬ್ಬಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವು ಅಂಶಗಳ ಕುರಿತು ಚರ್ಚಿಸಲಾಯಿತು. ಸಂಸ್ಥೆಯ ಚಟುವಟಿಕೆ ಕಾರ್ಯ ಯೋಜನೆಗಳ ಬಗ್ಗೆ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸದಸ್ಯರಿಗೆ ಮಾಹಿತಿ ನೀಡಿದರು. ಮುಂದಿನ ದಿನದಲ್ಲಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಉಪಯುಕ್ತವಾದ ಕಾರ್ಯಕ್ರಮವೊಂದನ್ನು ಆಯೋಜಿಸುವ ಕುರಿತು ಅಧ್ಯಕ್ಷ ಸುಬ್ಬಯ್ಯ ಅವರು ಸಭೆಗೆ ಮಾಹಿತಿ ನೀಡಿದರು.

ಸಂಸ್ಥೆಯ ಕಾರ್ಯದರ್ಶಿ ಚೆರ್‌ಮಂದAಡ ಮಣಿ ಪೊನ್ನಪ್ಪ, ಖಜಾಂಚಿ ಬಿದ್ದಂಡ ಬೆನ್ ಬೆಳ್ಯಪ್ಪ ಅವರು ಸಭೆಗೆ ಅಗತ್ಯ ಮಾಹಿತಿ ನೀಡಿದರು. ರಾಷ್ಟçಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.