ಮಡಿಕೇರಿ, ಡಿ. ೨೬: ಚಂಪಾ ಷಷ್ಠಿ ಅಂಗವಾಗಿ ಮಕ್ಕಂದೂರು ಗ್ರಾ.ಪಂ. ವ್ಯಾಪ್ತಿಯ ಹೆಮ್ಮೆತ್ತಾಳು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇಗುಲದ ಆವರಣದಲ್ಲಿರುವ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಅರ್ಚಕರಾದ ಶ್ರೀಕೃಷ್ಣ ಅವರು ಪೂಜಾದಿ ಕಾರ್ಯಗಳನ್ನು ನೆರವೇರಿಸಿದರು. ನೆರೆದಿದ್ದ ಭಕ್ತರಿಗೆ ಪ್ರಸಾದ ವಿನಿಯೋಗದೊಂದಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ದೇವಾಲಯ ಸಮಿತಿ ಅಧ್ಯಕ್ಷ ಕೋಡಿಯಡ್ಕ ರಾಜು, ದೇವಾಲಯದ ಪೂಜಾರಿ ಪಿ.ಪಿ. ಗಂಗಾಧರ, ಗ್ರಾಮಸ್ಥರು ಪಾಲ್ಗೊಂಡಿದ್ದರು.