ಮಡಿಕೇರಿ, ಡಿ. ೨೬: ನಾಪೋಕ್ಲು ಕರ್ನಾಟಕ ಪಬ್ಲಿಕ್ ಶಾಲೆಗೆ ಸೇರಿದ ಜಾಗದಲ್ಲಿ ಮರ ಹನನ ಮುಂದುವರಿದಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ಇಲ್ಲಿ ಮರ ಕಡಿತ ಹಾಗೂ ಮಾರಾಟ ಮಾಡುತ್ತಿರುವ ಬಗ್ಗೆ ‘ಶಕ್ತಿ’ಯ ಮೂಲಕ ಈ ವ್ಯಾಪ್ತಿಯ ಸಾರ್ವಜನಿಕರು ಜಿಲ್ಲಾಡಳಿತ ಹಾಗೂ ಸಂಬAಧಿಸಿದ ಇಲಾಖೆಯ ಗಮನ ಸೆಳೆದಿದ್ದರು. ಆದರೆ, ಈ ಬಗ್ಗೆ ಸಂಬAಧಿಸಿದವರು ಯಾವದೇ ಕ್ರಮ ಕೈಗೊಳ್ಳದ ಹಿನ್ನಲೆಯಲ್ಲಿ ಇಲ್ಲಿ ಮರ ಹನನ ನಿರಂತರವಾಗಿ ಮುಂದುವರಿದಿದೆ ಎಂದು ಅವರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಇನ್ನಾದರೂ ಸಂಬAಧಿಸಿದವರು ಈ ಬಗ್ಗೆ ಕಾನೂನು ಕ್ರಮಕೈಗೊಳ್ಳಲಿ ಎಂದು ‘ಶಕ್ತಿ’ಯ ಮೂಲಕ ಅವರು ಮನವಿ ಮಾಡಿಕೊಂಡಿದ್ದಾರೆ.