*ಗೋಣಿಕೊಪ್ಪಲು, ಡಿ. ೨೭: ಬಿಜೆಪಿ ರಾಜ್ಯ ರೈತ ಮೋರ್ಚಾ ಸದಸ್ಯರಾಗಿ ಬಾಳೆಲೆಯ ಮಾಪಂಗಡ ಯಮುನಾ ಚಂಗಪ್ಪ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷರಾದ ರಾಜ್ಯ ಸಭೆ ಸದಸ್ಯ ಈರಣ್ಣ ಕಾಡಾಡಿಯವರು ಆದೇಶ ಹೊರಡಿಸಿದ್ದಾರೆ.
ವೀರಾಜಪೇಟೆ ತಾಲೂಕು ಅಕ್ರಮ ಸಕ್ರಮ ಸಮಿತಿಯ ಸದಸ್ಯರಾಗಿರುವ ಯಮುನಾ ಚಂಗಪ್ಪ ಈ ಹಿಂದೆ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದರು.