ಸೋಮವಾರಪೇಟೆ, ಡಿ. ೨೭: ಸಾರ್ವಜನಿಕರ ಸಹಕಾರವಿದ್ದರೆ ಸಂಭವನೀಯ ಅಪರಾಧ ಪ್ರಕರಣಗಳನ್ನು ತಡೆಗಟ್ಟಬಹುದಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಪೊಲೀಸ್ ವೃತ್ತ ನಿರೀಕ್ಷಕ ಬಿ.ಜಿ. ಮಹೇಶ್ ಮನವಿ ಮಾಡಿದರು.

ಪೊಲೀಸ್ ಇಲಾಖೆಯ ವತಿಯಿಂದ ಇಲ್ಲಿನ ಪತ್ರಿಕಾಭವನ ಸಭಾಂಗಣದಲ್ಲಿ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಆಯೋಜಿಸಿದ್ದ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಸಾರ್ವಜನಿಕರ ಸಹಕಾರ ದೊಂದಿಗೆ ಪೊಲೀಸ್ ಇಲಾಖೆ ಮೂಲಕ ಪಟ್ಟಣದ ಆಯಕಟ್ಟಿನ ಸ್ಥಳಗಳಲ್ಲಿ ಸಿ.ಸಿ. ಕ್ಯಾಮೆರಾಗಳನ್ನು ಅಳವಡಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ೪ ಕಡೆಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿದ್ದು, ಮುಂದಿನ ದಿನಗಳಲ್ಲಿ ೬ ರಿಂದ ೮ ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸ ಲಾಗುವದು. ಇವುಗಳ ನಿರ್ವಹಣೆಯನ್ನು ಪೊಲೀಸ್ ಇಲಾಖೆಯೇ ಮಾಡಲಿದೆ ಎಂದರು.

ಪಟ್ಟಣದಲ್ಲಿ ವಾಹನಗಳ ನಿಲುಗಡೆ ಮತ್ತು ಓಡಾಟಕ್ಕೆ ಸಂಬAಧಿಸಿದAತೆ ಹೆಚ್ಚಿನ ಸುಧಾರಣಾ ಕ್ರಮಗಳ ಅವಶ್ಯವಿದೆ. ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡಿ ಇತರರ ಓಡಾಟಕ್ಕೆ ತಡೆಯೊಡ್ಡುವ ಘಟನೆಗಳು ಆಗಿಂದಾಗ್ಗೆ ನಡೆಯುತ್ತಿದೆ ಎಂದು ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಇಲಾಖೆಯ ಗಮನ ಸೆಳೆದರು.

ಇದರೊಂದಿಗೆ ಹಲವಷ್ಟು ಯುವಕರು ದ್ವಿಚಕ್ರ ವಾಹನಗಳನ್ನು ಅತೀ ವೇಗ ಮತ್ತು ಅಜಾಗರೂ Pಪೊಲೀಸ್ ಇಲಾಖೆಯಿಂದ ಸಿಗಬೇಕಾದ ಎಲ್ಲಾ ರೀತಿಯ ನೆರವನ್ನು ನೀಡಲು ಇಲಾಖೆ ಸಿದ್ಧವಿದೆ. ಅಪರಾಧ ಪ್ರಕರಣಗಳ ಇಳಿಕೆಯಿಂದ ಸಮಾಜ ಶಾಂತವಾಗಿರುತ್ತದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಇಲಾಖೆಗೆ ಅಗತ್ಯವಾಗಿದೆ ಎಂದು ಮಹೇಶ್ ಹೇಳಿದರು.

ವೇದಿಕೆಯಲ್ಲಿ ಠಾಣಾಧಿಕಾರಿ ಶ್ರೀಧರ್ ಉಪಸ್ಥಿತರಿದ್ದರು. ಸಭೆಯಲ್ಲಿ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಮನುಕುಮಾರ್ ರೈ, ಪ.ಪಂ. ಉಪಾಧ್ಯಕ್ಷ ಸಂಜೀವ, ವರ್ತಕರ ಸಂಘದ ಹೆಚ್.ಎನ್. ಅಶೋಕ್, ರಾಜನ್, ವಿಶುಕುಮಾರ್, ಅಭಿಷೇಕ್ ಗೋವಿಂದಪ್ಪ, ವೀರರಾಜು, ತಿಮ್ಮಶೆಟ್ಟಿ, ವಿಜಿ, ಪ್ರಮೋದ್, ಜನಾರ್ಧನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.Àತೆಯಿಂದ ಚಾಲನೆ ಮಾಡುತ್ತಿದ್ದಾರೆ. ಸೈಲೆನ್ಸರ್‌ಗಳನ್ನು ಆಲ್ಟೆçÃಷನ್ ಮಾಡಿ

ಕೊಂಡು ಕರ್ಕಶ ಶಬ್ದದೊಂದಿಗೆ ಓಡಾಡುವ ಬೈಕ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸಭೆಯಲ್ಲಿದ್ದ ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.