ಗೋಣಿಕೊಪ್ಪಲು, ಡಿ. ೨೭: ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದಲ್ಲಿ ಹಕ್ಕುಗಳನ್ನು ಪಡೆಯುವ ಮೂಲಕ ದಲಿತ ಸಮುದಾಯಗಳು ಹೆಚ್ಚಿನ ಶಿಕ್ಷಣ ಪಡೆಯುವ ಮೂಲಕ ಸಮಾಜದ ಮುಖ್ಯವಾಹಿನಿಯಲ್ಲಿ ತೊಡಗಿಸಿಕೊಳ್ಳುವಂತೆ ರಾಷ್ಟçಪತಿ ಪ್ರಶಸ್ತಿ ಪುರಸ್ಕೃತರಾದ ಮಡಿಕೇರಿಯ ವೃತ್ತ ನಿರೀಕ್ಷಕ ದಿವಾಕರ್ ಸಲಹೆ ನೀಡಿದರು.

ಗೋಣಿಕೊಪ್ಪಲುವಿನ ಪ್ರಕಾಶ್ ಇಂಟರ್ ನ್ಯಾಷನಲ್ ಹೊಟೇಲ್ ಸಭಾಂಗಣದಲ್ಲಿ ದಲಿತ ಸಂಘರ್ಷ ಸಮಿತಿಯ ಆಶ್ರಯದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ದಿವಾಕರ್, ಪ್ರತಿಯೋರ್ವರಲ್ಲಿಯೂ ವಿಭಿನ್ನವಾದ ಪ್ರತಿಭೆಗಳಿರುತ್ತದೆ. ಇವುಗಳಿಗೆ ಸರಿಯಾದ ವೇದಿಕೆಗಳಿಲ್ಲದೆ ಪ್ರತಿಭೆಗಳು ಹಾಳಾಗುತ್ತಿವೆ. ಆ ನಿಟ್ಟಿನಲ್ಲಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಪ್ರತಿಭೆಗಳನ್ನು ಗ್ರಾಮ ಮಟ್ಟದಲ್ಲಿ ಕಂಡು ಹಿಡಿಯುವ ಮೂಲಕ ವೇದಿಕೆ ರೂಪಿಸಬೇಕು. ಪ್ರತಿ ವಿದ್ಯಾರ್ಥಿಯು ಮುಂದೊAದು ದಿನ ಈ ದೇಶಕ್ಕೆ ಸೇವೆ ನೀಡುವ ಕಾರ್ಯ ಮಾಡಬಹುದು.ದುಶ್ಚಟಗಳಿಂದ ದೂರವಿರುವ ಮೂಲಕ ಸಮಾಜದ ಎಲ್ಲಾ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವುದರ ಮೂಲಕ ಮಾದರಿಯಾಗಬೇಕು. ಸಣ್ಣಪುಟ್ಟ ಸಮಸ್ಯೆಗಳು ಎದುರಾದಾಗ ಒಂದೆಡೆ ಕುಳಿತು ಇವುಗಳನ್ನು ಬಗೆ ಹರಿಸಿಕೊಳ್ಳಬೇಕು ಎಂದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಆರ್. ಪರಶುರಾಮ್ ಅಧ್ಯಕ್ಷತೆ ವಹಿಸಿ ಮಾತನಾಡಿ, ದಲಿತರೊಂದಿಗೆ ಪೊಲೀಸ್ ಇಲಾಖೆಯ ಕೆಲವು ಅಧಿಕಾರಿಗಳು ಉತ್ತಮ ಬಾಂಧವ್ಯ ಇಟ್ಟುಕೊಳ್ಳುವ ಮೂಲಕ ಸಮಸ್ಯೆಗಳು ಎದುರಾದಾಗ ಅವುಗಳನ್ನು ಬಗೆ ಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ರಾಷ್ಟç ಪ್ರಶಸ್ತಿ ಪಡೆದಿರುವ ದಿವಾಕರ್ ದಲಿತ ಸಮುದಾಯದೊಂದಿಗೆ ಉತ್ತಮ ಒಡನಾಟವಿಟ್ಟುಕೊಂಡು ಉತ್ತಮ ಕೆಲಸ ಮಾಡಿದ್ದಾರೆ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿ ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಇವರ ಉತ್ತಮ ಕಾರ್ಯಕ್ಕೆ ಪ್ರಶಸ್ತಿ ಬಂದಿರುವುದು ಶ್ಲಾಘನೀಯ. ಇವರ ಸೇವಾವಧಿಯಲ್ಲಿ ಮತ್ತಷ್ಟು ಪ್ರಶಸ್ತಿಗಳು ಇವರಿಗೆ ಬರುವಂತಾಗಲಿ ಎಂದರು.

ಸಮಾಜ ಸೇವಕ ಪಡಿಕಲ್ ಕುಸುಮಾ ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿ, ಕರ್ತವ್ಯ ಸಂದರ್ಭ ಬಡ ಜನತೆಗೆ ನ್ಯಾಯ ಕೊಡಿಸುವ ಕೆಲಸಗಳನ್ನು ಅಧಿಕಾರಿಗಳು ಮಾಡಿದ್ದಲ್ಲಿ ಬಡ ಜನತೆ ಇವರ ಸೇವೆಯನ್ನು ಸದಾ ಸ್ಮರಿಸುತ್ತದೆ. ಈ ನಿಟ್ಟಿನಲ್ಲಿ ದಿವಾಕರ್ ಮೊದಲ ಸಾಲಿನಲ್ಲಿದ್ದಾರೆ. ಇವರ ಕಾರ್ಯಕ್ಷಮತೆ, ಬಡಜನತೆಯೊಂದಿಗೆ ಇರುವ ಸಂಬAಧ ಶ್ಲಾಘನೀಯ ಎಂದರು. ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಘಟನಾ ಸಂಚಾಲಕಿ ಹೆಚ್.ಎನ್ ಮಂಜುಳ,v Áಲೂಕು ಕಾರ್ಮಿಕ ರೈತ ಸಂಘದ ಅಧ್ಯಕ್ಷ ಎಂ.ಸುನಿಲ್ ಉಪಾಧ್ಯಕ್ಷ ವಿ. ಕೃಷ್ಣಪ್ಪ, ಪ್ರದೀಪ್, ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಜಿಲ್ಲಾ ಸಂಘಟನಾ ಸಂಚಾಲಕ ಕುಮಾರ್ ಮಹಾದೇವ್ ಸ್ವಾಗತಿಸಿ, ವಂದಿಸಿದರು. ವಿವಿಧ ಭಾಗದ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.