ಮಡಿಕೇರಿ, ಡಿ. ೨೭: ಉಡುಪಿಯ ಪೇಜಾವರ ಮಠಾಧೀಶರು ಹಾಗೂ ಅಯೋಧ್ಯಾ ರಾಮಮಂದಿರ ನಿರ್ಮಾಣ ಟ್ರಸ್ಟ್ನ ಸದಸ್ಯರೂ ಆಗಿರುವ ಶ್ರೀ ವಿಶ್ವ ಪ್ರಸನ್ನ ತೀರ್ಥರು ತಾ. ೨೯ ರಂದು ಮಡಿಕೇರಿಗೆ ಆಗಮಿಸಲಿದ್ದಾರೆ.

ಬೆಳಿಗ್ಗೆ ೧೦.೩೦ಕ್ಕೆ ಆಂಜನೇಯ ದೇವಾಲಯ ಆವರಣದಲ್ಲಿ ವಿಶೇಷ ಕಾರ್ಯಕ್ರಮ ನಡೆಯಲಿದೆ. ಮುಖ್ಯವಾಗಿ ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಪ್ರಯುಕ್ತ ಕೊಡಗಿನಲ್ಲಿಯೂ ನಿಧಿ ಸಮರ್ಪಣಾ ಅಭಿಯಾನಕ್ಕೆ ಸ್ವಾಮೀಜಿ ಅವರು ಚಾಲನೆ ನೀಡಲಿದ್ದಾರೆ.

ಸಂಘ ಪರಿವಾರದಿಂದ ಈ ಕಾರ್ಯಕ್ರಮ ಏರ್ಪಟ್ಟಿರುವುದಾಗಿ ವಿಶ್ವ ಹಿಂದೂ ಪರಿಷತ್‌ನ ಜಿಲ್ಲಾ ಸಂಚಾಲಕ ನರಸಿಂಹ ಅವರು ‘ಶಕ್ತಿ’ಗೆ ತಿಳಿಸಿದ್ದಾರೆ.

ಆ ದಿನ ಗೋ ಪೂಜೆ ಬಳಿಕ ನಿಧಿ ಸಮರ್ಪಣಾ ಅಭಿಯಾನದ ಕಾರ್ಯಾಲಯವನ್ನು ವಿಶ್ವ ಪ್ರಸನ್ನ ತೀರ್ಥರು ಉದ್ಘಾಟಿಸಲಿದ್ದಾರೆ. ಬಳಿಕ ಸಾರ್ವಜನಿಕರನ್ನು ಉದ್ದೇಶಿಸಿ ಆಶೀರ್ವಚನ ನೀಡಲಿದ್ದಾರೆ. ಈ ಸಂದರ್ಭ ಕೊಡಗಿನ ಹಲವಾರು ಮಠಾಧೀಶರುಗಳು ಕೂಡ ಪಾಲ್ಗೊಳ್ಳಲಿ ರುವುದಾಗಿ ತಿಳಿದು ಬಂದಿದೆ.