ಮಡಿಕೇರಿ, ಡಿ. ೨೭: ಜಿಲ್ಲೆಯಲ್ಲಿ ತಾ.೨೭ ರಂದು ಹೊಸದಾಗಿ ೧೨ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೧೧,೨೫೯ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೭೧೧ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೫೭೭ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೭೫ ಮಂದಿ ಸಾವನ್ನಪ್ಪಿದ್ದು ೫೯ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೧೭ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೨ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೭೧ ನಿಯಂತ್ರಿತ ವಲಯಗಳಿವೆ.