ಮೂವರಲ್ಲಿ ಹೊಸ ಪ್ರಬೇಧದ ವೈರಾಣು ಪತ್ತೆ

ಬೆಂಗಳೂರು, ಡಿ. ೨೯: ಕೊರೊನಾ ವೈರಾಣುವಿನ ರೂಪಾಂತರಗೊAಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದ್ದು, ಹೊಸ ಪ್ರಬೇಧದ ವೈರಸ್ ಹರಡದಂತೆ ತಡೆಯಲು ತಜ್ಞರೊಂದಿಗೆ ಚರ್ಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಲಾಗುವುದು ಎಂದು ರಾಜ್ಯ ಆರೋಗ್ಯ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಪ್ರಥಮ

ಬೆಂಗಳೂರು, ಡಿ. ೨೯: ಕೊರೊನಾ ಸಂಕಷ್ಟದ ನಡುವೆಯೂ ಬಂಡವಾಳ ಹೂಡಿಕೆ ಪ್ರಸ್ತಾವದಲ್ಲಿ ದೇಶದಲ್ಲಿ ನಮ್ಮ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ, ನಮ್ಮ ರಾಜ್ಯದಲ್ಲಿ ರೂ. ೧,೫೪,೯೩೭ ಕೋಟಿ ಮೊತ್ತದ ೯೫ ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ. ಈ ಮೂಲಕ ನಮ್ಮ ರಾಜ್ಯವು ಹೂಡಿಕೆ ಪ್ರಸ್ತಾವದ ವಿಚಾರದಲ್ಲಿ ದೇಶದಲ್ಲಿಯೇ ಮೊದಲ ಸ್ಥಾನವನ್ನು ತನ್ನದಾಗಿಸಿಕೊಂಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ಇಂದು ನಗರದ ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ``ಮುಕ್ತ ಅವಕಾಶದ ಮೂಲಕ ಕೈಗಾರಿಕೆಗಳಿಗೆ ಕಡಿಮೆ ದರದಲ್ಲಿ ವಿದ್ಯುತ್ ಶಕ್ತಿಯನ್ನು ಪೂರೈಸುವ'' ಬಗ್ಗೆ ಅಸೋಚಾಮ್ ಆಯೋಜಿಸಿದ್ದ ವೆಬಿನಾರನ್ನು ಉದ್ಘಾಟಿಸಿ ಮಾತನಾಡಿದರು. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ ಮಾಹಿತಿ ಅನ್ವಯ ನಮ್ಮ ರಾಜ್ಯದಲ್ಲಿ ರೂ. ೧,೫೪,೯೩೭ ಕೋಟಿ ಮೊತ್ತದ ೯೫ ಹೂಡಿಕೆಯ ಪ್ರಸ್ತಾವನೆಗಳು ನೋಂದಣಿಯಾಗಿವೆ.

ವಲಸಿಗರ ಸಮೀಕ್ಷೆಗೆ ಮುಂದಾದ ಸರ್ಕಾರ

ಬೆಂಗಳೂರು, ಡಿ. ೨೯: ಕೋವಿಡ್-೧೯ನಿಂದಾಗಿ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ಹಿಂತಿರುಗಿರುವವರ ಸಮೀಕ್ಷೆಗೆ ರಾಜ್ಯ ಸರ್ಕಾರ ಮುಂದಾಗಿದೆ. ನಗರ ಪ್ರದೇಶಗಳನ್ನು ಬಿಟ್ಟು ವಾಪಸ್ ತಮ್ಮ ಊರು/ ಗ್ರಾಮಗಳಿಗೆ ಬಂದಿರುವವರಿಗೆ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಇವರಿಗೆ ಸಾಮಾಜಿಕ ಭದ್ರತೆ ಕಲ್ಪಿಸುವುದು ಸರ್ಕಾರದ ಈ ಸಮೀಕ್ಷೆಯ ಹಿಂದಿನ ಉದ್ದೇಶವಾಗಿದ್ದು, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಗೆ ಈ ಸಮೀಕ್ಷೆ, ಯೋಜನೆಯ ಪೂರ್ಣಗೊಳಿಸುವ ಜವಾಬ್ದಾರಿಯನ್ನು ನೀಡಲಾಗಿದೆ. ಈ ಸಮೀಕ್ಷೆ ಒಂದು ತಿಂಗಳ ಹಿಂದೆಯೇ ನಡೆಯಬೇಕಿತ್ತು. ಆದರೆ ಗ್ರಾಮ ಪಂಚಾಯಿತಿ ಚುನಾವಣೆಯ ನೀತಿ ಸಂಹಿತಿ ಜಾರಿಗೆ ಬಂದ ಹಿನ್ನೆಲೆ ವಿಳಂಬವಾಯಿತು. ಈಗ ಇಲಾಖೆಯ ಅಧಿಕಾರಿಗಳು ವಲಸೆ ಹೋಗಿ ವಾಪಸ್ಸಾಗಿರುವ ಮಂದಿಯ ಹೆಸರು, ವಿಳಾಸ, ನಗರ ಪ್ರದೇಶಗಳಲ್ಲಿ ಮಾಡುತ್ತಿದ್ದ ನೌಕರಿ, ಈಗ ಉದ್ಯೋಗ ಮಾಡುತ್ತಿದ್ದಾರೋ ಇಲ್ಲವೋ ಎಂಬ ಬಗ್ಗೆ ವಿಸ್ತöÈತ ಮಾಹಿತಿ ಕಲೆಹಾಕಲಿದ್ದಾರೆ.

ಗೋಹತ್ಯೆ ನಿಷೇಧ ಹೇಡಿತನವೆಂದ ಸಿದ್ದರಾಮಯ್ಯ

ಬೆಂಗಳೂರು, ಡಿ. ೨೯: ವಿಧಾನಮಂಡಲದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ಚರ್ಚೆಯನ್ನೇ ಮಾಡದೆ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವುದು ಸರ್ಕಾರದ ಹೇಡಿತನವನ್ನು ತೋರಿಸುತ್ತದೆ. ಚರ್ಚೆ ಮಾಡಿದರೆ ಈ ಮಸೂದೆಯ ಹಿಂದಿನ ದುರುದ್ದೇಶಗಳು ಅನಾವರಣಗೊಂಡು ತಮ್ಮ ಬಣ್ಣ ಬಯಲಾಗುತ್ತದೆ ಎಂಬ ಭಯ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸಚಿವ ಸಂಪುಟದಲ್ಲಿ ಜಾನುವಾರು ಸಂರಕ್ಷಣೆ ಮತ್ತು ಹತ್ಯೆ ಪ್ರತಿಬಂಧಕ ಸುಗ್ರೀವಾಜ್ಞೆಗೆ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿರುವುದನ್ನು ಖಂಡಿಸಿರುವ ಅವರು, ಮತೀಯ ಭಾವನೆಗಳನ್ನು ಕೆರಳಿಸಿ ರಾಜಕೀಯ ಲಾಭ ಪಡೆಯಬೇಕು ಮತ್ತು ಗೋರಕ್ಷಣೆಯ ಹೆಸರಲ್ಲಿ ಪುಂಡಾಟಿಕೆ ನಡೆಸು ವವರಿಗೆ ರಕ್ಷಣೆ ಕೊಡಬೇಕು ಎಂಬ ಎರಡು ದುರುದ್ದೇಶಗಳನ್ನು ಬಿಟ್ಟರೆ ಗೋಹತ್ಯೆ ನಿಷೇಧ ಮಸೂದೆಗೆ ಗೋವಿನ ಬಗ್ಗೆ ಭಕ್ತಿಯಾಗಲಿ, ಕಾಳಜಿಯಾಗಲಿ ಸರ್ಕಾರಕ್ಕೆ ಇಲ್ಲವೆಂದು ಗುಡುಗಿದ್ದಾರೆ. ಗೋಹತ್ಯೆಗೆ ನಿಷೇಧವಂತೆ, ಗೋಮಾಂಸ ಮಾರಾಟ ಮತ್ತು ಸೇವನೆಗೆ ನಿರ್ಬಂಧ ಇಲ್ಲವಂತೆ. ಇಂತಹದ್ದೊAದು ಎಡಬಿಡಂಗಿ ಕಾನೂನು ಮಾಡಲು ಇಷ್ಟೆಲ್ಲ ನಾಟಕ ಮಾಡಬೇಕೇ? ಮುಖ್ಯಮಂತ್ರಿ ಯಡಿಯೂರಪ್ಪ ಅವರೇ, ಮಾರಾಟ ಮಾಡಲು ಗೋಮಾಂಸವನ್ನು ಆಮದು ಮಾಡಿಕೊಳ್ತಿರಾ? ಎಂದು ಪ್ರಶ್ನಿಸಿದ್ದಾರೆ.

ಕಾಯ್ದೆ ವಿರೋಧಿಸಿದವರಿಗೆ ಲಾಠಿ ರುಚಿ

ಪಾಟ್ನಾ, ಡಿ. ೨೯: ಕೃಷಿ ಕಾಯ್ದೆ ವಿರೋಧಿಸಿ ರಾಜಭವನ ಮುತ್ತಿಗೆ ಹಾಕಲು ತೆರಳುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ಮಾರ್ಗ ಮಧ್ಯೆ ತಡೆದಿದ್ದಾರೆ. ಈ ವೇಳೆ ರಸ್ತೆಗೆ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ಕಿತ್ತು ಮುನ್ನುಗ್ಗಲು ಪ್ರಯತ್ನಿಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದು ಹಲವರು ಗಾಯಗೊಂಡಿದ್ದಾರೆ. ವಿವಿಧ ರೈತ ಸಂಘಟನೆಗಳ ಸದಸ್ಯರು ಮತ್ತು ಎಡಪಂಥೀಯ ಪರ ಸಂಘಟನೆಗಳನ್ನು ಒಳಗೊಂಡ ಸಾವಿರಾರು ಪ್ರತಿಭಟನಾಕಾರರನ್ನು ಡಕ್ ಬಂಗಲೆ ಕ್ರಾಸಿಂಗ್‌ನಲ್ಲಿ ಪೊಲೀಸರು ತಡೆಯೊಡ್ಡಿದರು. ಗಾಂಧಿ ಮೈದಾನದಲ್ಲಿ ರ‍್ಯಾಲಿ ಆರಂಭಿಸಿದ ಪ್ರತಿಭಟನಾಕಾರರು ಡಾಕ್ ಬಂಗಲೆಯ ಕ್ರಾಸಿಂಗ್ ಬಳಿ ಆಗಮಿಸುತ್ತಿದ್ದಂತೆ ಅಲ್ಲಿ ಬ್ಯಾರಿಕೇಡ್‌ಗಳನ್ನು ಹಾಕಿದ್ದ ಪೊಲೀಸರು ಮುಂದೆ ಹೋಗಲು ಅನುಮತಿ ನೀಡಲಿಲ್ಲ.

ಬಿಜೆಪಿ ತೊರೆದ ಗುಜರಾತ್ ಸಂಸದ

ಅಹಮದಾಬಾದ್, ಡಿ. ೨೯: ಬುಡಕಟ್ಟು ಜನರ ಪರ ಧ್ವನಿ ಎತ್ತಿರುವ ಗುಜರಾತ್ ಬಿಜೆಪಿ ಸಂಸದ ಮತ್ತು ಮಾಜಿ ಕೇಂದ್ರ ಸಚಿವ ಮನ್ಸುಖ್ ವಾಸವ ಬಿಜೆಪಿ ಪಕ್ಷವನ್ನು ತೊರೆದಿದ್ದಾರೆ. ಅಲ್ಲದೆ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಲೋಕಸಭೆ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸುವುದಾಗಿ ಹೇಳಿದ್ದಾರೆ. ನರ್ಮದಾ ಜಿಲ್ಲೆಯ ೧೨೧ ಗ್ರಾಮಗಳನ್ನು ಪರಿಸರ ಸೂಕ್ಷ÷್ಮ ವಲಯವೆಂದು ಘೋಷಿಸುವ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅಧಿಸೂಚನೆಯನ್ನು ಹಿಂಪಡೆಯಬೇಕೆAದು ಕೋರಿ ವಾಸವ ಕಳೆದ ವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಭರೂಚ್ ಕ್ಷೇತ್ರದ ಆರು ಬಾರಿಯ ಸಂಸದರಾದ ವಾಸವ ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರಿಗೆ ಬರೆದ ಪತ್ರದಲ್ಲಿ, "ನನ್ನ ತಪುö್ಪಗಳಿಂದಾಗಿ ಪಕ್ಷದ ವರ್ಚಸ್ಸಿಗೆ ಹಾನಿಯಾಗಬಾರದೆಂದು ಣಾನು ಪಕ್ಷಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ,ನಾನು ಪಕ್ಷದ ನಿಷ್ಠಾವಂತ ಕಾರ್ಯ ಕರ್ತನಾಗಿದ್ದೇನೆ, ನನ್ನನು ಕ್ಷಮಿಸಿ" ಎಂದು ಮನವಿ ಮಾಡಿದ್ದಾರೆ.

ಹೆಲಿಕಾಪ್ಟರ್‌ಗೆ ವನ್ಯಜೀವಿ ಕಾರ್ಯಕರ್ತರ ವಿರೋಧ

ಹುಬ್ಬಳ್ಳಿ, ಡಿ. ೨೯: ಹುಲಿ ಅಭಯಾರಣ್ಯ ಹತ್ತಿರ ಖಾಸಗಿ ಹೆಲಿಕಾಪ್ಟರ್‌ನ್ನು ನಿಲ್ಲಿಸಲು ಅನುವು ಮಾಡಿಕೊಟ್ಟ ಸರ್ಕಾರದ ನಡೆಗೆ ವನ್ಯಜೀವಿ ಕಾರ್ಯಕರ್ತರ ಒಂದು ಗುಂಪು ಆಕ್ರೋಶ ವ್ಯಕ್ತಪಡಿಸಿದೆ. ಕಳೆದ ವಾರ, ಟಿವಿಎಸ್ ಗ್ರೂಪ್ ಆಫ್ ಕಂಪೆನಿಯ ಅಧ್ಯಕ್ಷ ವೇಣು ಶ್ರೀನಿವಾಸನ್ ತಮ್ಮ ಖಾಸಗಿ ಹೆಲಿಕಾಪ್ಟರ್‌ನ್ನು ಹುಬ್ಬಳ್ಳಿಯ ಬೆಜ್ಜುಲುಪಾಳ್ಯ ಗ್ರಾಮದ ಕಂದಾಯ ಭೂಮಿಯಲ್ಲಿ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ನಿಲುಗಡೆ ಮಾಡಿದ್ದರು. ಈ ಗ್ರಾಮ ಬಿಆರ್‌ಟಿ ಹುಲಿ ಅಭಯಾರಣ್ಯದ ಪರಿಸರ ಸೂಕ್ಷ÷್ಮ ವಲಯದಲ್ಲಿ ವ್ಯಾಪ್ತಿಯಲ್ಲಿದ್ದು ಸುಪ್ರೀಂ ಕೋರ್ಟ್ನ ಮಾರ್ಗಸೂಚಿ ಪ್ರಕಾರ ಖಾಸಗಿ ಹೆಲಿಕಾಪ್ಟರ್, ವಿಮಾನಗಳ ಹಾರಾಟವನ್ನು ನಿಷೇಧಿಸಲಾಗಿದೆ. ಅರಣ್ಯ ಇಲಾಖೆ ಸೇರಿದಂತೆ ಇತರ ಸರ್ಕಾರಿ ಸಂಸ್ಥೆಗಳೊAದಿಗೆ ಸಮಾಲೋಚಿಸಿ ಹೆಲಿಕಾಪ್ಟರ್ ಇಳಿಯಲು ಅನುಮತಿ ನೀಡಲಾಗಿತ್ತು ಎಂದರೆ, ಶ್ರೀನಿವಾಸನ್ ಹೆಲಿಕಾಪ್ಟರ್ ಇಳಿಯಲು ಅನುಮತಿ ನೀಡುವಂತೆ ಮೇಲಿನಿಂದ ಪ್ರಭಾವಿ ವ್ಯಕ್ತಿಗಳ ಒತ್ತಡವಿತ್ತು ಎಂಬ ಆರೋಪ ಪರಿಸರ ರಕ್ಷಣಾಪರ ಹೋರಾಟಗಾರರದ್ದು. ಶ್ರೀನಿವಾಸನ್ ಅವರ ಹೆಲಿಕಾಪ್ಟರ್ ಇಳಿಸಲು ಮೈಸೂರಿನ ಉಸ್ತುವಾರಿ ಸಮಿತಿಯ ಸ್ಥಳೀಯ ಆಯುಕ್ತರು ಅನುಮತಿ ನೀಡಿದ್ದರು ಎಂದು ಹೇಳಲಾಗುತ್ತಿದೆ

ನಟ ರಜನಿಕಾಂತ್ ರಾಜಕೀಯ ಪ್ರವೇಶವಿಲ್ಲ

ಚೆನ್ನೆöÊ, ಡಿ. ೨೯: ಮುಂದಿನ ವರ್ಷದ ಆರಂಭದಲ್ಲಿ ರಾಜಕೀಯ ಪಕ್ಷ ಘೋಷಣೆ ಮಾಡುವುದಾಗಿ ಘೋಷಿಸಿಕೊಂಡಿದ್ದ ಸೂಪರ್ ಸ್ಟಾರ್ ರಜನಿಕಾಂತ್ ಅನಾರೋಗ್ಯ ಕಾರಣದಿಂದ ತಮ್ಮ ಯೋಜನೆಯನ್ನು ರದ್ದುಗೊಳಿಸಿದ್ದಾರೆ. ಇದೇ ೩೧ ರಂದು ತಮ್ಮ ರಾಜಕೀಯ ಪಕ್ಷ ಸ್ಥಾಪನೆಯನ್ನು ಘೋಷಿಸಲು ಮುಂದಾಗಿದ್ದರು. ಮುಂದಿನ ವರ್ಷದ ವಿಧಾನಸಭೆ ಚುನಾವಣೆಗೆ ಸಜ್ಜಾಗುವುದಾಗಿಯೂ ಹೇಳಿಕೊಂಡಿದ್ದರು. ಇಂದು ಇದ್ದಕ್ಕಿದ್ದಂತೆ ಟ್ವಿಟ್ಟರ್‌ನಲ್ಲಿ ಹೇಳಿಕೆ ಪ್ರಕಟಿಸಿ ಅವರ ಅಭಿಮಾನಿಗಳಲ್ಲಿ ಹಲವರಿಗೆ ನಿರಾಶೆಯನ್ನುಂಟು ಮಾಡಿದ್ದಾರೆ.