cಮಡಿಕೇರಿ, ಡಿ. ೨೮: ತಲಕಾವೇರಿ ಬೆಟ್ಟ ಪ್ರದೇಶದಲ್ಲಿ ಇಂಗುಗುAಡಿ ನಿರ್ಮಿಸಿರುವುದರಿಂದಾಗಿ ಗಜಗಿರಿ ಬೆಟ್ಟ ಕುಸಿತ ಉಂಟಾಗಿದೆ ಎಂದು ತಿಳಿದು ಬಂದಿದೆ. ಹಾಗಾಗಿ ಈ ಬಗ್ಗೆ ಮಾಹಿತಿ ಪಡೆದು ಮುಂದಿನ ಮಳೆಗಾಲದ ಒಳಗಡೆ ಇಂಗು ಗುಂಡಿಗಳನ್ನು ಮುಚ್ಚುವಂತಾಗಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅರಣ್ಯ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಕಳೆದ ಆಗಸ್ಟ್ನಲ್ಲಿ ತಲಕಾವೇರಿಯ ಗಜಗಿರಿ ಬೆಟ್ಟದಲ್ಲಿ ಸಂಭವಿಸಿದ ಭೂಕುಸಿತ ಸಂಬAಧ ಸ್ಥಳ ಅಧ್ಯಯನ ನಡೆಸಿದ್ದ ಜಿಎಸ್‌ಐ ವಿಜ್ಞಾನಿಗಳು ಹಾಗೂ ಅಧಿಕಾರಿಗಳೊಂದಿಗೆ ಭೂಕುಸಿತ ಪ್ರದೇಶ ವೀಕ್ಷಿಸಿದ ಬಳಿಕ ತಲಕಾವೇರಿಯ ಅರಣ್ಯ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಮಾಹಿತಿ ಬಯಸಿದರು.ಸಹಾಯಕ ಅರಣ್ಯ ಸಂರಕ್ಷಣಾಧಿ ಕಾರಿ ನೀಲೇಶ್ ಶಿಂಧೆ ಅವರು ಅರಣ್ಯ ಇಲಾಖೆಯಿಂದ ಕೈಗೊಂಡಿರುವ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ದಲ್ಲಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಮುಂದಿನ (ಮೊದಲ ಪುಟದಿಂದ) ಮಳೆಗಾಲದ ಒಳಗಡೆ ಇಂಗುಗುAಡಿಗಳನ್ನು ಮುಚ್ಚುವಂತಾಗಬೇಕೆAದು ಸೂಚನೆ ನೀಡಿದರು.

ಜಿಎಸ್‌ಐ ಪ್ರತಿನಿಧಿ ಅಯಿಜಾಜ್ (ಜಮ್ಮು ಮತ್ತು ಕಾಶ್ಮಿರ), ಕಮಲ್ ಕುಮಾರ್ (ಉತ್ತರ ಪ್ರದೇಶ) ಮತ್ತು ಸೆಂಥಿಲ್ ಕುಮಾರ್ (ತಮಿಳುನಾಡು) ಅವರು ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ಯಾವುದೇ ಕಾರಣಕ್ಕೂ ಇಂಗುಗುAಡಿ ತೆಗೆಯಬಾರದು. ಮರಗಿಡಗಳನ್ನು ಹೆಚ್ಚು ಬೆಳೆಸಬೇಕು. ಬ್ರಹ್ಮಗಿರಿ ಬೆಟ್ಟದಲ್ಲಿ ನೀರು ಇಂಗದAತೆ ತಡೆಯಬೇಕು ಎಂದು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೊಡಗು ಜಿಲ್ಲೆಯಲ್ಲಿ ೨೦೦೭, ೨೦೧೮, ೨೦೧೯ ಮತ್ತು ೨೦೨೦ ರಲ್ಲಿ ಭೂ ಕುಸಿತ ಉಂಟಾಗಿ, ಸಾಕಷ್ಟು ನಷ್ಟ ಉಂಟಾಗಿದೆ. ಆದ್ದರಿಂದ ಭೂ ಕುಸಿತ ತಡೆಯುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ಹೇಳಿದರು.

ಮಳೆಗಾಲದ ಅವಧಿಯಲ್ಲಿ ಸೂಕ್ಷö್ಮ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರಿಸುವುದು. ಜೊತೆಗೆ ಶಾಶ್ವತವಾಗಿ ಪುನರ್ ವಸತಿ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವುದು, ಭಾಗಮಂಡಲ ಗ್ರಾ.ಪಂ.ನಲ್ಲಿ ‘ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ’ ಇದ್ದು, ಈ ಸಮಿತಿ ಗಮನಕ್ಕೆ ತಂದು ಯಾವುದೇ ರೀತಿಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತಾಗಬೇಕು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು.

ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್, ಕಂದಾಯ, ಅರಣ್ಯ, ಲೋಕೋಪಯೋಗಿ, ಗಣಿ ಮತ್ತು ಭೂ ವಿಜ್ಞಾನ, ಭೂ ದಾಖಲೆಗಳ ಇಲಾಖೆಗಳು ಇದ್ದು, ಸಮಿತಿಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುವಂತಾಗಬೇಕು ಎಂಬ ಬಗ್ಗೆ ಸಭೆಯಲ್ಲಿ ಸಲಹೆ ಕೇಳಿ ಬಂದಿತು. ಗ್ರಾ.ಪಂ. ನೂತನ ಆಡಳಿತ ಬಂದ ನಂತರ ಜನಪ್ರತಿನಿಧಿಗಳನ್ನು ವಿಶ್ವಾಸಕ್ಕೆ ಪಡೆದು ಈ ಭೂಕುಸಿತಕ್ಕೆ ಕಾರಣದ ಬಗ್ಗೆ ಮನವರಿಕೆ ಮಾಡಿ, ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಹೇಳಿದರು.

ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಅವರು ಜಿಲ್ಲೆಯ ಪ್ರತಿ ಗ್ರಾ.ಪಂ.ಗಳಲ್ಲೂ ಪ್ರಕೃತಿ ವಿಕೋಪ ನಿರ್ವಹಣಾ ಸಮಿತಿ ರಚಿಸಲಾಗಿದ್ದು, ಆ ಸಮಿತಿಯಲ್ಲಿ ಆಯಾಯ ಗ್ರಾ.ಪಂ.ವ್ಯಾಪ್ತಿಯಲ್ಲಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ ಎಂದು ಹೇಳಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆಯಿಂದ ಭೂ ಕುಸಿತ ಸಂಬAಧಿಸಿದAತೆ ಯಾವ ಯಾವ ಗ್ರಾ.ಪಂ. ವ್ಯಾಪ್ತಿಯಲ್ಲಿ ಸಮಸ್ಯೆ ಇದೆ. ಪಟ್ಟಿ ಮಾಡಿ ಅಂತಹ ಕಡೆಗಳಲ್ಲಿ ಯಾವುದೇ ರೀತಿಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬೇಕು ಎಂಬ ಬಗ್ಗೆ ಚರ್ಚಿಸಿ ನಿರ್ಧರಿಸಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಮದನ್ ಮೋಹನ್ ಅವರು ಗಜಗಿರಿಬೆಟ್ಟದ ತಲಕಾವೇರಿಗೆ ತೆರಳುವ ರಸ್ತೆ ಕೆಳಭಾಗದಲ್ಲಿ ತಡೆಗೋಡೆ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ೭೫ ಲಕ್ಷ ರೂ.ಗೆ ಆಡಳಿತಾತ್ಮಕ ಅನುಮೋದನೆ ದೊರೆತಿದ್ದು, ಟೆಂಡರ್ ಹಂತದಲ್ಲಿ ಇದೆ ಎಂದು ಮಾಹಿತಿ ನೀಡಿದರು.

ತ್ಯಾಜ್ಯ ನಿರ್ವಹಣೆ-ಚರ್ಚೆ

ಇದೇ ಸಂದರ್ಭ ಭಾಗಮಂಡದಲ್ಲಿ ತ್ಯಾಜ್ಯ ನಿರ್ವಹಣಾ ಘಟಕ ಸ್ಥಾಪಿಸುವ ಸಂಬAಧ ಚರ್ಚೆ ನಡೆಯಿತು. ಈ ಬಗ್ಗೆ ಈಗಾಗಲೇ ದೇವಾಲಯ ವ್ಯವಸ್ಥಾಪನಾ ಸಮಿತಿ ಒಪ್ಪಿಗೆ ನೀಡಿದ ನಂತರವೇ ದೇವಾಲಯಕ್ಕೆ ಸೇರಿದ ಜಾಗವನ್ನು ಬಳಸಿಕೊಳ್ಳಲಾಗುತ್ತಿದೆ. ಗ್ರಾ.ಪಂ. ಮಟ್ಟದಲ್ಲಿ ನಡಾವಳಿ ಮಾಡಲಾಗಿದೆ. ಆ ದಿಸೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಆಡಳಿತಾಧಿಕಾರಿಯಾದ ನಂತರ ಗ್ರಾ.ಪಂ. ನೂತನ ಪ್ರತಿನಿಧಿಗಳು ಮತ್ತು ದೇವಾಲಯ ಆಡಳಿತ ಮಂಡಳಿ ಸಭೆ ಸೇರಿ ನಿರ್ಧಾರ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ತಾ.ಪಂ. ಇಒ ಲಕ್ಷಿö್ಮ, ತಹಶೀಲ್ದಾರ್ ಮಹೇಶ್, ಲೋಕೋಪಯೋಗಿ ಇಲಾಖೆ ಎಇಇ ಶಿವರಾಮ್, ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ಮರಿಸ್ವಾಮಿ, ಭಾಗಮಂಡಲ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಅನಿತಾ ಅವರು ಹಲವು ಮಾಹಿತಿ ನೀಡಿದರು.