ನಾಪೋಕ್ಲು, ಡಿ. ೨೮: ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವ ಆರೋಪದ ಹಿನ್ನೆಲೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಬಲ್ಲಮಾವಟಿ ಬಿಜೆಪಿ ಸ್ಥಾನೀಯ ಸಮಿತಿ ತಿಳಿಸಿದೆ.

ತಾ. ೨೨ ರಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ವಿರುದ್ಧವಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಮತಯಾಚಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.