ಮಡಿಕೇರಿ, ಡಿ. ೨೯: ಜಿಲ್ಲೆಯಲ್ಲಿ ತಾ. ೨೯ ರಂದು ಹೊಸದಾಗಿ ೨೧ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೧೨,೭೬೫ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೭೪೬ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೫೯೨ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೭೮ ಮಂದಿ ಸಾವನ್ನಪ್ಪಿದ್ದು ೭೬ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೨೭ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೯ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೬೦ ನಿಯಂತ್ರಿತ ವಲಯಗಳಿವೆ.