ಮಡಿಕೇರಿ, ಡಿ. ೨೯: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನ ಆಡಳಿತ ಮಂಡಳಿಯ ೨೦೨೦-೨೧ ರಿಂದ ೨೦೨೪-೨೫ರ ವರೆಗಿನ ೫ ವರ್ಷಗಳ ಅವಧಿಗೆ ನಿರ್ದೇಶಕರಾಗಿ ಕೊಡಗು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ಅಧ್ಯಕ್ಷರಾಗಿರುವ ಕೊಡಂದೇರ ಬಾಂಡ್ ಗಣಪತಿ ಅವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನದ ಚುನಾವಣೆಗೆ ಜಿಲ್ಲಾ ಕೇಂದ್ರ ಬ್ಯಾಂಕ್‌ನ ಪ್ರತಿನಿಧಿಯಾಗಿ ಬಾಂಡ್ ಗಣಪತಿ ಅವರ ಹೆಸರನ್ನು ಬ್ಯಾಂಕ್‌ನ ಆಡಳಿತ ಮಂಡಳಿ ಸರ್ವಾನುಮತದಿಂದ ಆಯ್ಕೆ ಮಾಡಿ ಕಳುಹಿಸಿತ್ತು. ಈ ಹಿನ್ನೆಲೆಯಲ್ಲಿ ತಾ. ೨೮ ರಂದು ನಿಗದಿಯಾಗಿದ್ದ ಅಪೆಕ್ಸ್ ಬ್ಯಾಂಕ್ ಚುನಾವಣೆಯಲ್ಲಿ ಬಾಂಡ್ ಗಣಪತಿ ನಿರ್ದೇಶಕರಾಗಿ ನೇಮಕವಾಗಿದ್ದಾರೆ.