ಮಡಿಕೇರಿ, ಡಿ. ೨೯: ಕೊಡಗು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆದಿರುವ ೧೦೧ ಗ್ರಾ.ಪಂ. ಗಳ ಮತ ಎಣಿಕೆಯು ಜಿಲ್ಲೆಯ ಮಡಿಕೇರಿ, ವೀರಾಜಪೇಟೆ ಮತ್ತು ಕುಶಾಲನಗರದಲ್ಲಿ ತಾ. ೩೦ ರಂದು (ಇಂದು) ನಡೆಯಲಿದೆ.ಮತ ಎಣಿಕೆಯು ತಾ. ೩೦ ರಂದು (ಇಂದು) ಬೆಳಿಗ್ಗೆ ೮ ಗಂಟೆಗೆ ಆರಂಭವಾಗಲಿದ್ದು, ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದ್ದು, ೨೬ ಕೊಠಡಿಗಳಲ್ಲಿ, ೪೫ ಟೇಬಲ್ಗಳನ್ನು ಅಳವಡಿಸಲಾಗಿದ್ದು, ೯೮ ಎಣಿಕೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ. ಸೋಮವಾರಪೇಟೆ ತಾಲೂಕಿಗೆ ಸಂಬAಧಿಸಿದAತೆ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ೧೩ ಕೊಠಡಿಗಳಲ್ಲಿ ೫೯ ಮೇಜುಗಳನ್ನು ಅಳವಡಿಸಲಾಗಿದ್ದು, ೧೩೦ ಮತ ಎಣಿಕೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಹಾಗೆಯೇ ವೀರಾಜಪೇಟೆ ತಾಲೂಕಿಗೆ ಸಂಬAಧಿಸಿದAತೆ ವೀರಾಜಪೇಟೆ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ನಡೆಯಲಿದ್ದು, ೧೧ ಕೊಠಡಿಗಳಲ್ಲಿ, ೪೫ ಟೇಬಲ್ಗಳನ್ನು ಅಳವಡಿಸಲಾಗಿದ್ದು, ೧೦೦ ಎಣಿಕೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆ ಜಿಲ್ಲೆಯ ಮೂರು ಕಡೆಯಲ್ಲಿ ನಡೆಯುವ ಮತ ಎಣಿಕೆಯು ಒಟ್ಟು ೫೦ ಕೊಠಡಿಗಳಲ್ಲಿ, ೧೪೯ ಮೇಜುಗಳನ್ನು ಅಳವಡಿಸ ಲಾಗಿದ್ದು, ಮತ ಎಣಿಕೆಗೆ ಅಗತ್ಯ ಸಿದ್ಧತೆ ಮಾಡಲಾಗಿದೆ. ಅಭ್ಯರ್ಥಿಗಳು, ಎಣಿಕೆ ಏಜೆಂಟರುಗಳು ಎಣಿಕೆ ಕೇಂದ್ರಕ್ಕೆ ಪ್ರವೇಶಿಸಲು ಸಂಬAಧಪಟ್ಟ ಚುನಾವಣಾಧಿಕಾರಿಗಳಿಂದ ಅಥವಾ ತಹಶೀಲ್ದಾರ್ ಅವರಿಂದ ಪಡೆದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಮೊಬೈಲ್ ಹಾಗೂ ಬೆಂಕಿಪೊಟ್ಟಣ ಮತ್ತಿತರ ಸ್ಫೋಟಕ ವಸ್ತುಗಳನ್ನು ಮತ ಎಣಿಕೆ ಕೇಂದ್ರಕ್ಕೆ ತೆಗೆದುಕೊಂಡು ಹೋಗುವಂತಿಲ್ಲ ಮತ್ತು ಎಣಿಕೆ ಕೊಠಡಿಯೊಳಗೆ ಅನಧಿ ಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಲಾಗಿದೆ.
ಮತ ಎಣಿಕೆ ಕಾರ್ಯಕ್ಕಾಗಿ ಒಟ್ಟು ೩೨೮ ಅಧಿಕಾರಿ, ಸಿಬ್ಬಂದಿಗಳನ್ನು ಮತ ಎಣಿಕೆ ಮೇಲ್ವಿಚಾರಕರು ಹಾಗೂ ಮತ ಎಣಿಕೆ ಸಹಾಯಕರಾಗಿ ನೇಮಕ ಮಾಡಲಾಗಿದೆ. ಅಲ್ಲದೇ ಕಂದಾಯ ಇಲಾಖೆಯ ಸಿಬ್ಬಂದಿಗಳನ್ನು ಇತರ ಎಣಿಕೆ ಕೆಲಸಗಳಿಗೆ ನಿಯೋಜಿಸ ಲಾಗಿದೆ.
ಮತ ಎಣಿಕೆಗಳ ಮೇಲ್ವಿಚಾರಣಾ ಕಾರ್ಯದಲ್ಲಿ ಚುನಾವಣಾ ವೀಕ್ಷಕರಿಗೆ ಸಹಕರಿಸಲು ವೀರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಚುನಾವಣಾ ವೀಕ್ಷಕರು ಮಡಿಕೇರಿ ತಾಲೂಕಿನ ಮತ ಎಣಿಕೆ ಕಾರ್ಯದ ಮೇಲ್ವಿಚಾರಣೆ ಮಾಡಲಿದ್ದಾರೆ.
ಸೋಮವಾರಪೇಟೆ ತಾಲೂಕಿಗೆ ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡೂ ಮತ್ತು ವೀರಾಜ ಪೇಟೆ ತಾಲೂಕಿಗೆ ಜಿಲ್ಲಾಧಿಕಾರಿಗಳ ತಾಂತ್ರಿಕ ಸಹಾಯಕರು ಹಾಗೂ ಪದನಿಮಿತ್ತ ಭೂ ದಾಖಲೆಗಳ ಉಪ ನಿರ್ದೇಶಕ ಪಿ. ಶ್ರೀನಿವಾಸ್ ಅವರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ ಎಂದು ಅನೀಸ್ ಕಣ್ಮಣಿ ಜಾಯ್ ಅವರು ಮಾಹಿತಿ ನೀಡಿದ್ದಾರೆ. (ಮೊದಲ ಪುಟದಿಂದ)
ಕೋವಿಡ್-೧೯ ಹಿನ್ನೆಲೆ ಮತ ಎಣಿಕೆ ಕಾರ್ಯಕ್ಕೆ ಕೈಗೊಂಡಿರುವ ಕ್ರಮಗಳು: ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನೇಮಕಾತಿ ಮಾಡಿ ಎಣಿಕೆ ಕೇಂದ್ರದೊಳಗೆ ಪ್ರವೇಶಿಸುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಥರ್ಮಲ್ ಸ್ಕಾö್ಯನ್ಗೆ ಒಳಪಡಿಸಲಾಗುವುದು.
ಅಧಿಕಾರಿಗಳು, ಸಿಬ್ಬಂದಿಗಳು, ಅಭ್ಯರ್ಥಿಗಳು ಮತ್ತು ಏಜೆಂಟರುಗಳು ಕಡ್ಡಾಯವಾಗಿ ಫೇಸ್ಮಾಸ್ಕ್ ಧರಿಸುವುದು. ಕೈಗಳನ್ನು ಸ್ವಾನಿಟೈಸರ್ನಿಂದ ಶುಚಿಗೊಳಿಸಿಕೊಳ್ಳುವುದು. ವಿಜೇತ ಅಭ್ಯರ್ಥಿಗಳಿಗೆ ದೃಢೀಕರಣ ಪತ್ರವನ್ನು ನೀಡುವಾಗ ಹಸ್ತಲಾಘವ ಮಾಡುವಂತಿಲ್ಲ. ಗುಂಪುಗಳಲ್ಲಿ, ಮೆರವಣಿಗೆಗಳ ಮೂಲಕ ವಿಜೇತ ಅಭ್ಯರ್ಥಿಗಳು ವಿಜಯೋತ್ಸವ ಆಚರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಗ್ರಾ.ಪಂ. ಚುನಾವಣೆ ಮತ ಎಣಿಕೆ ಅಧಿಕಾರಿಗಳಿಗೆ ನಗರದ ಸಂತ ಜೋಸೆಫರ ಶಾಲೆ ಸಭಾಂಗಣದಲ್ಲಿ ತರಬೇತಿ ನಡೆಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮತ ಎಣಿಕೆ ಸಿದ್ಧತೆ ಬಗ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಚುನಾವಣಾ ಮೇಲುಸ್ತುವಾರಿ ನಿಲೇಶ್ ಸಿಂಧೆ, ಚುನಾವಣಾ ವೀಕ್ಷಕ ಎ. ದೇವರಾಜು, ತಹಶೀಲ್ದಾರ್ ಮಹೇಶ್, ಡಿವೈಎಸ್ಪಿ ದಿನೇಶ್ ಕುಮಾರ್ ಇತರರು ಇದ್ದರು.
ಗ್ರಾ.ಪಂ. ಚುನಾವಣೆ ಮತ ಎಣಿಕೆ ಬಗ್ಗೆ ಕೆ.ಜೆ. ದಿವಾಕರ ಅವರು ಮತ ಎಣಿಕೆ ಮೇಲ್ವಿಚಾರಕರು ಮತ್ತು ಸಹಾಯಕರಿಗೆ ತರಬೇತಿ ನೀಡಿದರು. ಹಾಗೆಯೇ ಆರ್ಒ ಮತ್ತು ಎಆರ್ಒಗಳಿಗೆ ಅಂಚೆ ಮತಪತ್ರ ಎಣಿಕೆ ಮತ್ತು ಅಂತಿಮ ಫಲಿತಾಂಶ ಪ್ರಕಟ ಬಗ್ಗೆ ಮಾಹಿತಿ ನೀಡಿದರು.