ಮಡಿಕೇರಿ ಡಿ.೨೯ : ನಗರದ ಪ್ರಮುಖ ಬಡಾವಣೆಗಳಲ್ಲಿ ಒಂದಾದ ಕಾವೇರಿ ಬಡಾವಣೆಯಲ್ಲಿ ಕಳೆದ ಅನೇಕ ವರ್ಷಗಳಿಂದ ಮೂಲಭೂತ ಸಮಸ್ಯೆಗಳನ್ನು ಎದುರಿಸುತ್ತಿದೆ. ರಸ್ತೆ ಮತ್ತು ಚರಂಡಿ ಅವ್ಯವಸ್ಥೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸ್ಥಳೀಯ ನಿವಾಸಿಗಳು ಪೌರಾಯುಕ್ತರನ್ನು ಭೇಟಿಯಾಗಿ ಸ್ಥಳ ಪರಿಶೀಲನೆ ನಡೆಸುವಂತೆ ಒತ್ತಾಯಿಸಿದರು.

ತಕ್ಷಣ ಸ್ಪಂದಿಸಿದ ಪೌರಾಯುಕ್ತ ರಾಮದಾಸ್ ಅವರು ಅವ್ಯವಸ್ಥೆಗಳನ್ನು ಖುದ್ದು ಪರಿಶೀಲಿಸಿ ದುರಸ್ತಿ ನೀರು ಕಾವೇರಿ ಬಡಾವಣೆಗೆ ನುಗ್ಗಿ ಮನೆಗಳನ್ನೂ ಆವರಿಸುತ್ತಿದೆ. ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲೇ ಜೀವನ ಸಾಗಿಸು ವಂತಾಗಿದೆ ಎಂದು ಸ್ಥಳೀಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ರಸ್ತೆ ಸಂಪೂರ್ಣವಾಗಿ ಹದಗೆಟ್ಟು ವಾಹನಗಳು ಓಡಾಡಲು ಕಾರ್ಯದ ಭರವಸೆ ನೀಡಿದರು. ಕಾವೇರಿ ಬಡಾವಣೆಯಲ್ಲಿ ಸುಮಾರು ೨೦೦ ಹಾಗೂ ಪಕ್ಕದ ಟಿ. ಜಾನ್ ಬಡಾವಣೆಯಲ್ಲಿ ೫೦ಕ್ಕೂ ಹೆಚ್ಚಿನ ಕುಟುಂಬಗಳಿವೆ. ಇಲ್ಲಿನ ನಿವಾಸಿಗಳು ತಮ್ಮ ದೈನಂದಿನ ವ್ಯವಹಾರಗಳಿಗೆ ಸಾಧ್ಯವೇ ಇಲ್ಲದಂತಾಗಿದೆ. ದ್ವಿಚಕ್ರ ವಾಹನಗಳು ಮತ್ತು ಪಾದಚಾರಿಗಳು ರಾತ್ರಿ ವೇಳೆಯಲ್ಲಿ ಬಿದ್ದು ಗಾಯಗೊಂಡಿರುವ ಘಟನೆಯೂ ನಡೆದಿದೆ. ಈ ಹಿಂದೆ ಹಲವು ಬಾರಿ ಸಮಸ್ಯೆಗಳನ್ನು ಬಗೆಹರಿಸುವಂತೆ ನಗರಸಭೆಗೆ ಮನವಿ ಮಾಡಿದರೂ ಯಾವುದೇ ಸ್ಪಂದನ ದೊರೆತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಹದಗೆಟ್ಟ ರಸ್ತೆ, ಮೋರಿ, ಚರಂಡಿಗಳನ್ನು ಪರಿಶೀಲಿಸಿದ ಪೌರಾಯುಕ್ತರು ತಕ್ಷಣ ದುರಸ್ತಿ ಕಾರ್ಯ ಕೈಗೊಳ್ಳುವ ಭರವಸೆ ನೀಡಿದರು.

ಇದಕ್ಕೂ ಮೊದಲು ಕಾವೇರಿ ಬಡಾವಣೆ ನಿವಾಸಿಗಳು ನಗರಸಭಾ ಕಾರ್ಯಾಲಯಕ್ಕೆ ತೆರಳಿ ಮನವಿ ಪತ್ರ ಸಲ್ಲಿಸಿ ಸಮಸ್ಯೆಗಳಿಗೆ ಸ್ಪಂದಿಸುವAತೆ ಒತ್ತಾಯಿಸಿದರು.