ಮಡಿಕೇರಿ, ಡಿ.೨೯ : ಕೊಡಗಿನ ಪತ್ರಕರ್ತ ಬೊಳ್ಳಜಿರ ಬಿ.ಅಯ್ಯಪ್ಪ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಪ.ಗೋ ಪ್ರಶಸ್ತಿ ಲಭಿಸಿದೆ. ೨೦೧೯ ಜುಲೈ ೨೪ ರಂದು ಕಾವೇರಿ ಟೈಮ್ಸ್ ಪತ್ರಿಕೆಯಲ್ಲಿ ಪ್ರಕಟಗೊಂಡ “ಬದುಕಿಗಾಗಿ ಅಡುಗೆ ಉತ್ಪನ್ನಗಳ ತಯಾರಿಕೆಯಲ್ಲಿ ಮಗ್ನರಾಗಿರುವ ಕಾಲೂರಿನ ಸಂತ್ರಸ್ತ ಮಹಿಳೆಯರು” ವರದಿಗೆ ಈ ಪ್ರಶಸ್ತಿ ದೊರೆತಿದೆ. ಇದೇ ತಾ. ೩೧ ರಂದು ಮಂಗಳೂರಿನಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅಯ್ಯಪ್ಪ ಪ್ರಶಸ್ತಿ ಪಡೆಯಲಿದ್ದಾರೆ.