ಕಣಿವೆ, ಡಿ. ೨೯: ಕುಶಾಲನಗರದ ಬಸಪ್ಪ ಬಡಾವಣೆಯಲ್ಲಿ ರಸ್ತೆ ಬದಿಯಲ್ಲಿ ಬೆಳೆದು ನಿಂತಿದ್ದ ಶ್ರೀಗಂಧದ ಮರವನ್ನು ತುಂಡರಿಸಿದ ದುಷ್ಕರ್ಮಿಗಳು ಬುಡವನ್ನು ಹೊತ್ತೊಯ್ದು ಉಳಿಕೆ ಮರದ ಕಾಂಡವನ್ನು ಬಿಟ್ಟು ಪರಾರಿಯಾದ ಘಟನೆ ಸೋಮವಾರ ನಡುರಾತ್ರಿಯಲ್ಲಿ ನಡೆದಿದೆ.

ಮಂಗಳವಾರ ಬೆಳಿಗ್ಗೆ ಮಾಹಿತಿ ಮೇರೆಗೆ ಧಾವಿಸಿದ ಅರಣ್ಯ ಸಿಬ್ಬಂದಿಗಳು ಮಹಜರು ನಡೆಸಿ ದೂರು ದಾಖಲಿಸಿಕೊಂಡಿದ್ದಾರೆ.

ಜನವಸತಿ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಶ್ರೀಗಂಧದ ಮರವನ್ನು ಕಡಿದು ಹೊತ್ತೊಯ್ದಿರುವ ದುಷ್ಕರ್ಮಿಗಳನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕೆಂದು ನಿವಾಸಿಗಳು ಒತ್ತಾಯಿಸಿದ್ದಾರೆ.