ಮಡಿಕೇರಿ, ಡಿ. ೩೦: ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಪಕ್ಷದ ೧೩೬ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ರಾಷ್ಟçಪಿತ ಮಹಾತ್ಮಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಸಂವಿಧಾನದ ವಿಧಿಯ ಪ್ರಮಾಣ ವಚನ ಸ್ವೀಕರಿಸಿದರು.
ಈ ಸಂದರ್ಭ ಮಾತನಾಡಿದ ಕೆಪಿಸಿಸಿ ಪ್ರಮುಖ ಟಿ.ಪಿ. ರಮೇಶ್, ದೇಶದಲ್ಲಿ ಯಾವುದೇ ರಾಜಕೀಯ ಪಕ್ಷಕ್ಕೆ ಇಷ್ಟು ದೊಡ್ಡ ಇತಿಹಾಸವಿಲ್ಲ. ಇಂದು ಭಾರತ ದೇಶ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಇನ್ನಿತರ ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದಿದ್ದರೆ ಅದಕ್ಕೆ ಕಾಂಗ್ರೆಸ್ ಪಕ್ಷದ ಮಹಾಚೇತನಗಳು ಕಾರಣ ಎಂದು ಬಣ್ಣಿಸಿದರು. ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ವೀಕ್ಷಕ ಟಿ.ಎಂ. ಶಾಹಿದ್ ಮಾತನಾಡಿ, ಕಾಂಗ್ರೆಸ್ ಪಕ್ಷವನ್ನು ಸಂಘಟಿಸಿ, ಪ್ರಬಲಗೊಳಿಸಿ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯ ನಿರ್ವಹಿಸಬೇಕಾಗಿದೆ. ಗ್ರಾಮೀಣ ಮಟ್ಟದಿಂದಲೇ ಪಕ್ಷದ ಬಲವರ್ಧನೆಯಾಗಬೇಕಾಗಿದ್ದು, ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಕೆ.ಕೆ. ಮಂಜುನಾಥ್‌ಕುಮಾರ್, ಪಕ್ಷದಿಂದ ಸ್ಥಾನಮಾನ ಪಡೆದವರು ಪಕ್ಷಕ್ಕಾಗಿ ದುಡಿಯಬೇಕಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ ಕಳೆದ ಎರಡು ವರ್ಷಗಳಿಂದ ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸಿದ್ದೇನೆ. ಎಲ್ಲರೂ ಸಹಕಾರ ನೀಡಿದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಬಹುದಾಗಿದೆ ಎಂದರು.
ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಉಪಾಧ್ಯಕ್ಷ ಡಾ. ಹಸೈನಾರ್ ಮಾತನಾಡಿದರು. ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ. ಸತೀಶ್‌ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್, ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ. ಉಸ್ಮಾನ್, ಡಿಸಿಸಿ ವಕ್ತಾರ ಟಿ.ಇ. ಸುರೇಶ್, ಜಿಲ್ಲಾ ಸಾಮಾಜಿಕ ಜಾಲತಾಣದ ಸಂಯೋಜಕ ಹೊಸೂರು ಸೂರಜ್, ಮಡಿಕೇರಿ ನಗರಾಧ್ಯಕ್ಷ ಅಬ್ದುಲ್ ರಜಾಕ್ ಹಾಗೂ ಕುಶಾಲನಗರ ಪಟ್ಟಣ ಅಧ್ಯಕ್ಷ ಶರೀಫ್ ಅವರುಗಳು ಮಾತನಾಡಿ ಸಲಹೆ ನೀಡಿದರು.
ಮಹಿಳಾ ಘಟಕದ ಜಿಲ್ಲಾ ಕಾರ್ಯದರ್ಶಿ ಮಿನಾಜ್ ಪ್ರವೀಣ್, ಸೇವಾದಳದ ಜಿಲ್ಲಾಧ್ಯಕ್ಷೆ ಪ್ರೇಮಾ ಕೃಷ್ಣಪ್ಪ, ಮಡಿಕೇರಿ ನಗರಾಧ್ಯಕ್ಷೆ ಹೊಟ್ಟೆಯಂಡ ಪಾರ್ವತಿ ಫ್ಯಾನ್ಸಿ, ನಗರಸಭೆಯ ಮಾಜಿ ಸದಸ್ಯೆ ಬೇಗಂ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಎಸ್.ಎ. ಹನೀಫ್ ಹಾಗೂ ಇತರರು ಇದ್ದರು.