ಮಡಿಕೇರಿ, ಡಿ. ೩೦: ತಾಲೂಕಿನ ೨೬ ಗ್ರಾಮ ಪಂಚಾಯಿತಿಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಗರದ ಸಂತ ಜೋಸೆಫರ ವಿದ್ಯಾಸಂಸ್ಥೆ ಆವರಣದಲ್ಲಿ ಬಿರುಸಿನಿಂದ ನಡೆಯಿತು. ತಾಲೂಕಿನ ೧೦೮ ಕ್ಷೇತ್ರಗಳ, ೨೬೭ ಸ್ಥಾನಕ್ಕೆ ಒಟ್ಟು ೬೭೬ ಅಭ್ಯರ್ಥಿಗಳ ಭವಿಷ್ಯ ಪೆಟ್ಟಿಗೆಯಲ್ಲಿ ಅಡಗಿತ್ತು. ಬೆಳಿಗ್ಗೆ ೮ ಗಂಟೆಯಿAದ ಮತ ಎಣಿಕೆ ಆರಂಭವಾಯಿತು. ಮೊದಲು ಸ್ಟಾçಂಗ್ ರೂಂನಿAದ ಮತ ಪೆಟ್ಟಿಗೆಯನ್ನು ನಿಯಮಾನುಸಾರ ಎಣಿಕೆ ಕೇಂದ್ರಕ್ಕೆ ಕಳುಹಿಸಲಾಯಿತು. (ಮೊದಲ ಪುಟದಿಂದ) ಮಡಿಕೇರಿ ತಾಲೂಕಿಗೆ ಸಂಬAಧಿಸಿದAತೆ ೨೬ ಕೊಠಡಿಗಳಲ್ಲಿ, ೪೫ ಟೇಬಲ್‌ಗಳನ್ನು ಅಳವಡಿಸಲಾಗಿದ್ದು, ೯೮ ಎಣಿಕೆ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು. ಚುನಾವಣಾಧಿಕಾರಿಗಳಿಂದ ಅಥವಾ ತಹಶೀಲ್ದಾರ್ ಅವರಿಂದ ಪಡೆದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ತೋರಿಸಿ ಅಭ್ಯರ್ಥಿಗಳು, ಏಜೆಂಟರುಗಳು ಎಣಿಕೆ ಕೇಂದ್ರಕ್ಕೆ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿತ್ತು. ಮೊಬೈಲ್ ಹಾಗೂ ಬೆಂಕಿಪೊಟ್ಟಣ ಮತ್ತಿತರ ಸ್ಫೋಟಕ ವಸ್ತುಗಳನ್ನು ಮತ ಎಣಿಕೆ ಕೇಂದ್ರಕ್ಕೆ ತರಲು ನಿರ್ಬಂಧ ವಿಧಿಸುವದರ ಜೊತೆಗೆ ಎಣಿಕೆ ಕೊಠಡಿಯೊಳಗೆ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿಷೇಧಿಸಿದ್ದ ಹಿನ್ನೆಲೆ ಕೇಂದ್ರಕ್ಕೆ ಬರುವವರನ್ನು ಪೊಲೀಸರು ಪರಿಶೀಲನೆ ನಡೆಸಿದರು.
ಕೋವಿಡ್-೧೯ ಹಿನ್ನೆಲೆ ಮತ ಎಣಿಕೆ ಕಾರ್ಯಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿತ್ತು. ಆರೋಗ್ಯ ಇಲಾಖೆಯ ಸಿಬ್ಬಂದಿಗಳನ್ನು ನೇಮಕಾತಿ ಮಾಡಿ ಎಣಿಕೆ ಕೇಂದ್ರದೊಳಗೆ ಪ್ರವೇಶಿಸುವ ಅಧಿಕಾರಿಗಳು, ಸಿಬ್ಬಂದಿಗಳನ್ನು ಥರ್ಮಲ್ ಸ್ಕಾö್ಯನ್‌ಗೆ ಒಳಪಡಿಸಿದ ನಂತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಅಧಿಕಾರಿಗಳು, ಸಿಬ್ಬಂದಿಗಳು, ಅಭ್ಯರ್ಥಿಗಳು ಮತ್ತು ಏಜೆಂಟರುಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು. ಕೈಗಳನ್ನು ಸ್ವಾನಿಟೈಸರ್‌ನಿಂದ ಶುಚಿಗೊಳಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿತ್ತು. ಮತ ಎಣಿಕೆ ನಡೆಯುವ ಕೇಂದ್ರಗಳ ೫ ಕಿ.ಮೀ. ವ್ಯಾಪ್ತಿಯಲ್ಲಿ ಗುಂಪು ಸೇರುವುದು, ಪಟಾಕಿ ಸಿಡಿಸುವುದು, ವಿಜಯೋತ್ಸವ, ಮೆರವಣಿಗೆಗೆ ನಿರ್ಬಂಧ ವಿಧಿಸಿದ್ದರು ಕೂಡ ಗೆಲುವು ಸಾಧಿಸಿದ ಅಭ್ಯರ್ಥಿಗಳ ಬೆಂಬಲಿಗರು ಹಾರ ಹಾಕಿ, ಘೋಷಣೆ ಕೂಗಿ ಸಂಭ್ರಮಿಸಿದ್ದು ಕಂಡು ಬಂತು.
ಅಧಿಕಾರಿಗಳ ಭೇಟಿ: ಎಣಿಕೆ ಪ್ರಕ್ರಿಯೆ ಆರಂಭವಾದ ಬಳಿಕ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಚುನಾವಣಾ ವೀಕ್ಷಕ ದೇವರಾಜ್, ಜಿ.ಪಂ. ಮುಖ್ಯ ಕಾರ್ಯನಿರ್ವಾ ಹಣಾಧಿಕಾರಿ ಭಂವರ್ ಸಿಂಗ್, ಹೆಚ್ಚುವರಿ ಜಿಲ್ಲಾಧಿಕಾರಿ ರೂಪ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
-ಹೆಚ್. ಜೆ. ರಾಕೇಶ್