ಮಡಿಕೇರಿ, ಡಿ. ೩೦: ಜಿಲ್ಲೆಯಲ್ಲಿ ತಾ. ೩೦ ರಂದು ಹೊಸದಾಗಿ ೬ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೧೪,೨೮೭ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೭೫೨ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೬೦೧ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೭೮ ಮಂದಿ ಸಾವನ್ನಪ್ಪಿದ್ದು ೭೩ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೨೮ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೪೫ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೫೫ ನಿಯಂತ್ರಿತ ವಲಯಗಳಿವೆ.