ಚೆಟ್ಟಳ್ಳಿ, ಜ. ೧: ಇಲ್ಲಿನ ಸಹಕಾರ ಸಂಘದಲ್ಲಿ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪನವರ ನೇತೃತ್ವದಲ್ಲಿ ಪಂಚಮುಖಿ ಪಶುಪತಿಲಿಂಗ ಪ್ರತಿಷ್ಠಾಪನೆ ಮಾಡಲಾಯಿತು. ಈ ಸಂದರ್ಭ ಚೆಟ್ಟಳ್ಳಿ ಸಹಕಾರ ಸಂಘದ ನಿರ್ದೇಶಕರು ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ತಾ. ೧೫ರಂದು ಚೆಟ್ಟಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮೇಲಿನ ಅಂತಸ್ತಿನಲ್ಲಿ ನಿರ್ಮಾಣವಾಗುತ್ತಿರುವ ಪುಣ್ಯಕೋಟಿ ವಾಣಿಜ್ಯ ಸಂಕೀರ್ಣದಲ್ಲಿ ಗೋಮಾತೆ ಹಾಗೂ ನಾಗದೇವರ ಮೂರ್ತಿಗಳು ಪ್ರತಿಷ್ಠಾಪನೆಯಾಗಲಿದೆ.