ಮಡಿಕೇರಿ, ಜ. ೧: ಜಿಲ್ಲೆಯಲ್ಲಿ ಕೋವಿಡ್ ಸಂಬAಧ ೨ ಮಂದಿ ಮೃತಪಟ್ಟಿದ್ದು ಮೃತರ ಸಂಖ್ಯೆ ೮೦ ಕ್ಕೇರಿದೆ. ಗೋಣಿಕೊಪ್ಪದ ವೆಂಕಟಪ್ಪ ಲೇಔಟ್‌ನ ೮೯ ವರ್ಷದ ಪುರುಷ ಹಾಗೂ ಸೋಮವಾರಪೇಟೆ ತಾಲೂಕಿನ ಮಾದಾಪುರದ ೫೦ ವರ್ಷದ ಮಹೆಳೆ ಸೋಂಕಿಗೆ ಬಲಿಯಾಗಿದ್ದಾರೆ.

ಜಿಲ್ಲೆಯಲ್ಲಿ ತಾ. ೧ ರಂದು ಹೊಸದಾಗಿ ೧೭ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೧೭,೩೬೯ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೭೮೫ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೬೧೩ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೮೦ ಮಂದಿ ಸಾವನ್ನಪ್ಪಿದ್ದು ೯೨ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೩೩ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ, ೫೯ ಮಂದಿ ಹೋಮ್ ಐಸೋಲೇಷನ್‌ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೫೭ ನಿಯಂತ್ರಿತ ವಲಯಗಳಿವೆ.