ಸೋಮವಾರಪೇಟೆ,ಜ.೧: ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಗುಣಮಟ್ಟದ ಶಿಕ್ಷಣ ನೀಡುವದರಿಂದ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಭಿಮತ ವ್ಯಕ್ತಪಡಿಸಿದರು.
ಸಮಾಜಕಲ್ಯಾಣ ಇಲಾಖೆ ಮೂಲಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ತಾಲೂಕಿನ ತೋಳೂರುಶೆಟ್ಟಳ್ಳಿಯ ಪ್ರಸಾದ ಪ್ರೌಢಶಾಲೆ ಆವರಣದಲ್ಲಿ ರೂ. ೨೫.೨೧ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ(ಪರಿಶಿಷ್ಟ ಜಾತಿ)ಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬೃಹತ್ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾದರೆ ಆ ಪ್ರದೇಶಗಳೂ ಅಭಿವೃದ್ಧಿ ಹೊಂದುತ್ತವೆ. ಸೋಮವಾರಪೇಟೆ,ಜ.೧: ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಗುಣಮಟ್ಟದ ಶಿಕ್ಷಣ ನೀಡುವದರಿಂದ ಉತ್ತಮ ನಾಗರಿಕ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಅಭಿಮತ ವ್ಯಕ್ತಪಡಿಸಿದರು.
ಸಮಾಜಕಲ್ಯಾಣ ಇಲಾಖೆ ಮೂಲಕ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ತಾಲೂಕಿನ ತೋಳೂರುಶೆಟ್ಟಳ್ಳಿಯ ಪ್ರಸಾದ ಪ್ರೌಢಶಾಲೆ ಆವರಣದಲ್ಲಿ ರೂ. ೨೫.೨೧ ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ(ಪರಿಶಿಷ್ಟ ಜಾತಿ)ಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬೃಹತ್ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾದರೆ ಆ ಪ್ರದೇಶಗಳೂ ಅಭಿವೃದ್ಧಿ ಹೊಂದುತ್ತವೆ. ಪ್ರಯೋಜನವಾಗುತ್ತಿತ್ತು ಎಂದರು.
ಮುAದಿನ ದಿನಗಳಲ್ಲಿ ಶಾಂತಳ್ಳಿಯಲ್ಲಿ ಸ್ಥಗಿತಗೊಂಡಿರುವ ಪದವಿಪೂರ್ವ ಕಾಲೇಜು ಕಟ್ಟಡದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವದು ಎಂದು ರಂಜನ್ ತಿಳಿಸಿದರು.
ಮುಖ್ಯ ಅತಿಥಿಯಾಗಿದ್ದ ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಮಾತನಾಡಿ, ಸಮಾಜ ಕಲ್ಯಾಣ ಇಲಾಖೆಯ ಹಿಂದಿನ ಅಧಿಕಾರಿ ಅಂಬೇಡ್ಕರ್ ವಸತಿ ಶಾಲೆಯನ್ನು ಕುಶಾಲನಗರಕ್ಕೆ ಸ್ಥಳಾಂತರಿಸಲು ಸಾಕಷ್ಟು ಯತ್ನ ನಡೆಸಿದ್ದರು. ಆದರೆ ಶಾಸಕರು ಹಾಗೂ ಸ್ಥಳೀಯರ ಸಹಕಾರದಿಂದ ಇಲ್ಲೇ ಉಳಿಸಿಕೊಳ್ಳಲು ಸಾಧ್ಯವಾಗಿದೆ ಎಂದರು.
ಜಿ.ಪA. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಕವಿತ ಪ್ರಭಾಕರ್ ಮಾತನಾಡಿ, ಶಿಕ್ಷಣವೇ ನಿಜವಾದ ಆಸ್ತಿಯಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಬೇಕು. ಕಟ್ಟಡ ಕಾಮಗಾರಿ ಕಳಪೆಯಾಗದಂತೆ ಸ್ಥಳೀಯರು ಜಾಗ್ರತೆ ವಹಿಸಬೇಕು ಎಂದು ಕಿವಿಮಾತು ಹೇಳಿದರು.
ತಾ.ಪಂ. ಉಪಾಧ್ಯಕ್ಷ ಅಭಿಮನ್ಯುಕುಮಾರ್ ಮಾತನಾಡಿ, ಶಿಕ್ಷಣಕ್ಕೆ ಪೂರಕವಾದ ಪ್ರಶಾಂತ ವಾತಾವರಣ ತೋಳೂರು ಶೆಟ್ಟಳ್ಳಿಯಲ್ಲಿದ್ದು, ಇಲ್ಲಿ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣವಾದರೆ ಕನಿಷ್ಟ ೬೦೦ ವಿದ್ಯಾರ್ಥಿಗಳಿಗೆ ಉಪಯೋಗ ವಾಗಲಿದೆ ಎಂದರು. ವಿಧಾನ ಪರಿಷತ್ ಮಾಜೀ ಸದಸ್ಯ ಎಸ್.ಜಿ. ಮೇದಪ್ಪ, ಪ್ರಸಾದ ಪೌಢಶಾಲೆಯ ಅಧ್ಯಕ್ಷ ಕೆ.ಟಿ. ಪರಮೇಶ್ ಅವರುಗಳು ಮಾತನಾಡಿದರು.
ವೇದಿಕೆಯಲ್ಲಿ ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯರಾದ ಬಿ.ಎ. ಧರ್ಮಪ್ಪ, ಹೆಚ್.ಎನ್. ತಂಗಮ್ಮ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಶೇಖರ್, ಪ್ರಸಾದ ಪ್ರೌಢಶಾಲೆಯ ಪ್ರಮುಖರಾದ ನಂದಕುಮಾರ್, ಉದಯಕುಮಾರ್, ಎಸ್.ಪಿ. ಮಾಚಯ್ಯ, ಕೆ.ಕೆ. ಸುಧಾಕರ್, ದೊಡ್ಡಯ್ಯ, ಸುಬ್ಬಯ್ಯ, ಸೀತಮ್ಮ, ಲಿಂಗಪ್ಪ, ಮೋರಾರ್ಜಿ ಶಾಲೆಗಳ ಜಿಲ್ಲಾ ಎಇಇ ನಾಗರಾಜ್, ಇಲಾಖೆಯ ಜಿಲ್ಲಾ ಸಮನ್ವಯಾಧಿಕಾರಿ ಲೋಕೇಶ್, ಪ್ರಾಂಶುಪಾಲ ಚಂದ್ರಶೇಖರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.