ಸಿದ್ದಾಪುರ ಜ. ೧: ತಾಲೂಕು ಪಂಚಾಯಿತಿಯ ಅವಧಿ ಮುಕ್ತಾಯಗೊಳ್ಳುವ ಮುಂಚಿತವೇ ತಾಲೂಕು ಪಂಚಾಯಿತಿ ಸದಸ್ಯರೊಬ್ಬರು ಗ್ರಾಮ ಪಂಚಾಯಿತಿಗೆ ಆಯ್ಕೆಗೊಂಡಿದ್ದಾರೆ. ವಾಲ್ನೂರು ತ್ಯಾಗತ್ತೂರು ತಾ.ಪಂ ಕ್ಷೇತ್ರದಿಂದ ಕಳೆದ ಬಾರಿ ಆಯ್ಕೆಯಾದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುಹದಾ ಅಶ್ರಫ್ ತಾ.ಪಂ. ಅವಧಿ ಮುಕ್ತಾಯ ಆಗುವ ಮುನ್ನ ಗ್ರಾ.ಪಂ. ಚುನಾವಣೆಯಲ್ಲಿ ನೆಲ್ಯಹುದಿಕೇರಿಯ ನಲ್ವತ್ತೇಕರೆ ಭಾಗದಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದಾರೆ.