ಮಡಿಕೇರಿ, ಡಿ. ೩೧: ವಿಶೇಷಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ೨೦೨೦-೨೧ನೇ ಸಾಲಿನಲ್ಲಿ ಶ್ರವಣದೋಷವುಳ್ಳ ವ್ಯಕ್ತಿಗಳ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರವನ್ನು ಪಡೆಯಲು ಹಾಗೂ ಎಸ್‌ಎಸ್‌ಎಲ್‌ಸಿ ಮತ್ತು ನಂತರ ವ್ಯಾಸಂಗ ಮಾಡುತ್ತಿರುವ ಶೇ. ೪೦ ಕ್ಕಿಂತ ಹೆಚ್ಚು ದೃಷ್ಟಿದೋಷವಿರುವ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‌ಟಾಪ್ ನೀಡುವ ಯೋಜನೆಗಳ ಸೌಲಭ್ಯವನ್ನು ಅರ್ಹ ವಿಶೇಷಚೇತನರು ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ ದೂ. ೦೮೨೭೨-೨೯೫೮೨೯ ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ.