ಜಿಲ್ಲೆಯಲ್ಲಿ ತಾ.೩೧ ರಂದು ಹೊಸದಾಗಿ ೧೬ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜಿಲ್ಲೆಯಲ್ಲಿ ಇದುವರೆಗೆ ೧,೧೬,೦೦೩ ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷಿಸಿದ್ದು, ೫,೭೬೮ ಮಂದಿಗೆ ಸೋಂಕು ತಗುಲಿದೆ. ಈ ಪೈಕಿ ೫,೬೦೯ ಮಂದಿ ಗುಣಮುಖರಾಗಿದ್ದಾರೆ. ಒಟ್ಟು ೭೮ ಮಂದಿ ಸಾವನ್ನಪ್ಪಿದ್ದು ೮೧ ಪ್ರಕರಣಗಳು ಸಕ್ರಿಯವಾಗಿವೆ. ಸೋಂಕಿತರ ಪೈಕಿ ೨೮ ಮಂದಿ ಕೋವಿಡ್ ಆಸ್ಪತ್ರೆಯಲ್ಲಿ , ೫೩ ಮಂದಿ ಹೋಮ್ ಐಸೋಲೇಷನ್ ನಲ್ಲಿ ದಾಖಲಾಗಿದ್ದಾರೆ. ಜಿಲ್ಲೆಯಾದ್ಯಂತ ೫೫ ನಿಯಂತ್ರಿತ ವಲಯಗಳಿವೆ.