ಮಡಿಕೇರಿ, ಜ. ೨: ಕಳೆದ ಆಗಸ್ಟ್ ತಿಂಗಳಲ್ಲಿ ಭಾರಿ ಮಳೆಯಿಂದಾಗಿ ಹಾನಿಗೊಳಗಾದ ಕಾಮಗಾರಿ ಕೈಗೊಳ್ಳಲು ಸರ್ಕಾರದಿಂದ ರೂ. ೪೬ ಕೋಟಿ ಬಿಡುಗಡೆಯಾಗಿದ್ದು, ಈ ಸಂಬAಧ ಕ್ರಿಯಾಯೋಜನೆಗೆ ಅನುಮೋದನೆ ಪಡೆದು ಕಾಮಗಾರಿ ಕೈಗೊಳ್ಳುವಂತೆ ಸಂಬAಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಳೆಹಾನಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳಿಗೆ ಸಂಬAಧಿಸಿದAತೆ ಮಾಹಿತಿ ಪಡೆದು ಅವರು ಮಾತನಾಡಿದರು.

ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಪಾಲಿಸಬೇಕು. ಮಳೆ ಹಾನಿ ಕಾಮಗಾರಿ ಸಂಬAಧ ಈಗಾಗಲೇ ಆಡಳಿತಾತ್ಮಕ ಅನುಮೋದನೆ ನೀಡಿ ಶೇ.೨೫ ರಷ್ಟು ಹಣ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿ ಆರಂಭಿಸಬೇಕು. ಜೊತೆಗೆ ಬಾಕಿ ಹಣ ಬಿಡುಗಡೆ ಸಂಬAಧ ಪ್ರಸ್ತಾವನೆ ಸಲ್ಲಿಸುವಂತೆ ಇಂಜಿನಿಯರ್‌ಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

೨೦೧೮ ಮತ್ತು ೨೦೧೯ ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗಳಿಗೆ ಇದುವರೆಗೆ ‘ಹಣ ಬಳಕೆ ಪ್ರಮಾಣ ಪತ್ರ’ ಸಲ್ಲಿಸದಿರುವುದಕ್ಕೆ ಜಿಲ್ಲಾಧಿಕಾರಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಪಂಚಾಯತ್ ರಾಜ್ ಇಂಜಿನಿಯರಿAಗ್ ವಿಭಾಗ, ಲೋಕೋಪಯೋಗಿ, ಪಿಎಂಜಿಎಸ್‌ವೈ, ಗ್ರಾಮೀಣ ಕುಡಿಯುವ ನೀರು ವಿಭಾಗ ಹೀಗೆ ಹಲವು ಇಂಜಿನಿಯರ್ ವಿಭಾಗಕ್ಕೆ ಹಣ ಬಿಡುಗಡೆ ಮಾಡಲಾಗಿದೆ. ೨೦೧೮ ಮತ್ತು ೧೯ ರಲ್ಲಿ ಸಂಭವಿಸಿದ ಮಳೆಹಾನಿ ಕಾಮಗಾರಿಗಳಿಗೆ ಬಿಡುಗಡೆಯಾದ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ತಿಳಿಸಿದರು. ಮುಜರಾಯಿ ಇಲಾಖೆ ವ್ಯಾಪ್ತಿಯ ಕಾಮಗಾರಿಗಳಿಗೆ ಸಂಬAಧಿಸಿದAತೆ ಜಿಲ್ಲಾಧಿಕಾರಿ ಮಾಹಿತಿ ಪಡೆದರು.

ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ ಅವರು ಮಳೆ ಹಾನಿ ಕಾಮಗಾರಿ ಸಂಬAಧ ಮಾಹಿತಿ ನೀಡಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ಕಾರ್ಯಪ್ಪ, ಡಿಎಚ್‌ಒ ಡಾ.ಕೆ.ಮೋಹನ್, ಡಾ.ರೂಪೇಶ್, ಡಾ.ಆನಂದ್, ಡಿಯುಡಿಸಿ ಯೋಜನಾ ನಿರ್ದೇಶಕರಾದ ರಾಜು, ಪಿಆರ್‌ಇಡಿ ಇಂಜಿನಿಯರ್ ಶ್ರೀಕಂಠಯ್ಯ, ಪಿಡಬ್ಲುö್ಯಡಿ ಎಂಜಿನಿಯರ್ ವೇಣುಗೋಪಾಲ, ಪಿಎಂಜಿಎಸ್‌ವೈ ಇಂಜಿನಿಯರ್ ಪ್ರಭು, ಡಿಡಿಪಿಐ ಪಿ.ಎಸ್.ಮಚ್ಚಾಡೋ, ಪಶುಪಾಲನಾ ಇಲಾಖೆ ಡಿಡಿ ಸುರೇಶ್ ಭಟ್, ಪೌರಾಯುಕ್ತ ಎಸ್.ವಿ.ರಾಮದಾಸ್, ಬಿಸಿಎಂ ಅಧಿಕಾರಿ ನಿಂಗರಾಜು, ತಹಶೀಲ್ದಾರ್ ಗೋವಿಂದರಾಜು, ಮಹೇಶ್, ಯೋಗಾನಂದ, ಪ.ಪಂ.ಇಒಗಳಾದ ಶ್ರೀಧರ, ನಾಚಪ್ಪ, ಡಿಯುಡಿಸಿ ಎಇಇ ನಟರಾಜು, ಮಹೇಂದ್ರ ಕುಮಾರ್ ಇತರರು ಇದ್ದರು.