ರಾಜ್ಯದಲ್ಲಿ ೨೪ ಗಂಟೆ ಅಂಗಡಿ, ವಾಣಿಜ್ಯ ಮಳಿಗೆ ತೆರೆಯಲು ಅವಕಾಶ

ಬೆಂಗಳೂರು, ಜ. ೨: ೧೦ಕ್ಕಿಂತ ಹೆಚ್ಚು ಕಾರ್ಮಿಕರನ್ನು ಹೊಂದಿರುವ ಹೊಟೇಲ್, ಕಾಫೀಶಾಪ್ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ವಾರದ ಏಳೂ ದಿನ, ದಿನದ ೨೪ ಗಂಟೆಯೂ ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಕಾರ್ಮಿಕ ಇಲಾಖೆ ಅಧಿಸೂಚನೆ ಹೊರಡಿಸಿದ್ದು, ಮುಂದಿನ ಮೂರು ವರ್ಷ ಈ ಅಧಿಸೂಚನೆ ಅನ್ವಯವಾಗಲಿದ್ದು, ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳು ತಮ್ಮ ನೌಕರರಿಗೆ ಕಡ್ಡಾಯವಾಗಿ ವಾರದಲ್ಲಿ ಒಂದು ದಿನ ರಜೆ ನೀಡಬೇಕು. ಅದನ್ನು ಅಂಗಡಿಯಲ್ಲಿ ಎಲ್ಲರಿಗೂ ಕಾಣುವಂತೆ ಪ್ರದರ್ಶಿಸಬೇಕು ಎಂದು ತಿಳಿಸಲಾಗಿದೆ. ರಜೆ ಹಾಗೂ ವಾರದ ರಜೆಯಲ್ಲಿರುವ ಉದ್ಯೋಗಿಯ ಮಾಹಿತಿಯನ್ನು ಎಲ್ಲರಿಗೂ ಕಾಣಿಸುವಂತೆ ಪ್ರದರ್ಶನ ಮಾಡಬೇಕು. ಕಾರ್ಮಿಕರ ಸಂಬಳ ಮತ್ತು ಹೆಚ್ಚುವರಿ ಅವಧಿಯ ಭತ್ಯೆಯನ್ನು ೧೯೬೩ರ ಸಂಬಳ ಮತ್ತು ಭತ್ಯೆ ಕಾಯ್ದೆ ಅನ್ವಯ ನೀಡಬೇಕು. ಪ್ರತಿಯೊಬ್ಬ ಕಾರ್ಮಿಕರಿಗೆ ೮ ಗಂಟೆ ಅವಧಿಗೆ ಮೀರಿ ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಹೆಚ್ಚುವರಿ ಅವಧಿಯನ್ನೂ ಗರಿಷ್ಠ ೨ ಗಂಟೆ ಮೀರುವಂತಿಲ್ಲ. ಮೂರು ತಿಂಗಳಲ್ಲಿ ೫೦ ಗಂಟೆ ಹೆಚ್ಚುವರಿ ಅವಧಿ ಮೀರುವಂತಿಲ್ಲ. ಕಾರ್ಮಿಕರನ್ನು ರಜೆಯ ದಿನ ಅಥವಾ ಕೆಲಸದ ಅವಧಿ ಮುಗಿದ ಮೇಲೆ ನಿರ್ದಿಷ್ಟ ಸೂಚನೆ ಇಲ್ಲದೇ ಹೆಚ್ಚುವರಿ ಅವಧಿ ಕೆಲಸ ಮಾಡಿಸುವುದು ಕಂಡು ಬಂದರೆ ಅಂತಹ ಅಂಗಡಿ ಮಳಿಗೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಾಮಾನ್ಯ ಸಂದರ್ಭದಲ್ಲಿ ರಾತ್ರಿ ೮ ಗಂಟೆ ನಂತರ ಮಹಿಳಾ ಕಾರ್ಮಿಕರನ್ನು ಕೆಲಸ ಮಾಡಿಸಿಕೊಳ್ಳುವಂತಿಲ್ಲ. ಒಂದು ವೇಳೆ ಮಹಿಳಾ ಕಾರ್ಮಿಕರು ಲಿಖಿತ ಒಪ್ಪಿಗೆ ನೀಡಿದರೆ ರಾತ್ರಿ ೮ ರಿಂದ ಬೆಳಗಿನ ೬ ಗಂಟೆಯ ತನ ಅವರ ಗೌರವಕ್ಕೆ ಧಕ್ಕೆ ಬಾರದಂತೆ, ರಕ್ಷಣೆ ನೀಡಿ, ಕೆಲಸ ಒದಗಿಸಬಹುದು. ಎಲ್ಲ ಮಹಿಳಾ ಸಿಬ್ಬಂದಿಗೆ ಪಾಳಿ ಆಧಾರದಲ್ಲಿಯೇ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಈ ಬಗ್ಗೆ ಅಂಗಡಿಯ ಬೋರ್ಡ್ ನಲ್ಲಿ ಮಾಹಿತಿ ಪ್ರದರ್ಶನ ಮಾಡಬೇಕು. ಅಂಗಡಿ ಮಳಿಗೆಗಳಲ್ಲಿ ಕಾರ್ಮಿಕರಿಗೆ ಅಗತ್ಯ ಶೌಚಾಲಯ, ವಿಶ್ರಾಂತಿ ಕೊಠಡಿ, ಸೇಫ್ಟಿ ಲಾಕರ್ ಒದಗಿಸಬೇಕು. ಮಹಿಳಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವ ಅಂಗಡಿ ಮಳಿಗೆಗಳು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವವರ ವಿರುದ್ಧ ದೂರು ಸಲ್ಲಿಸಲು ಆಂತರಿಕ ಸಮಿತಿ ರಚನೆ ಮಾಡಬೇಕು. ಆ ಸಮಿತಿ ಸಕ್ರಿಯವಾಗಿರುವಂತೆ ನೋಡಿಕೊಳ್ಳಬೇಕು. ಈ ನಿಯಮಗಳ ಉಲ್ಲಂಘನೆ ಮಾಡುವ ಅಂಗಡಿ ಮತ್ತು ವಾಣಿಜ್ಯ ಮಳಿಗೆಗಳ ವಿರುದ್ದ ೧೯೬೧ ವಾಣಿಜ್ಯ ಅಂಗಡಿಗಳು ಮತ್ತು ಮಳಿಗೆಗಳ ಕಾಯ್ದೆ ಪ್ರಕಾರ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸೌರವ್ ಗಂಗೂಲಿಗೆ ಲಘು ಹೃದಯಾಘಾತ

ಕೊಲ್ಕತ್ತಾ, ಜ. ೨: ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಕಾರ್ಯಾಧ್ಯಕ್ಷ ಸೌರವ್ ಗಂಗೂಲಿ ಲಘು ಹೃದಯಾಘಾತಕ್ಕೊಳಗಾಗಿದ್ದಾರೆ. ಕೊಲ್ಕತ್ತಾದ ವುಡ್ ಲ್ಯಾಂಡ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಬೆಳಗ್ಗಿನ ವ್ಯಾಯಾಮದ ಬಳಿಕ ಸಣ್ಣದಾಗಿ ಅವರಿಗೆ ಎದೆನೋವು ಕಾಣಿಸಿಕೊಂಡ ಬಳಿಕ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. "ಹೃದಯನಾಳದಲ್ಲಿ ಸಣ್ಣ ಅಡೆತಡೆಗಳು ಇದ್ದು, ಎಂಜಿಯೋಗ್ರಫಿ ನಡೆಸಿದ ಬಳಿಕ ಎಂಜಿಯೋಪ್ಲಾಸ್ಟ್ ನಡೆಸಲಾಗುವುದು. ಸದ್ಯ ಗಂಭೀರಾವಸ್ಥೆಯಿAದ ಪಾರಾಗಿದ್ದು, ಆರೋಗ್ಯವು ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಕೇಂದ್ರದಿAದ ಎಸ್‌ಸಿ ಮಕ್ಕಳಿಗೆ ಸ್ಕಾಲರ್‌ಶಿಪ್ ವರದಾನ

ಬೆಂಗಳೂರು, ಜ. ೨: ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಸ್ಕಾಲರ್‌ಶಿಪ್‌ಗೆ ೫೯,೦೪೮ ಕೋಟಿ ರೂಪಾಯಿ ನೀಡಲು ಕೇಂದ್ರ ಸರಕಾರ ಮುಂದಾಗಿದ್ದು ಇದು ಬಡ ವಿದ್ಯಾರ್ಥಿಗಳಿಗೆ ವರದಾನದಂತೆ ಕಾರ್ಯ ನಿರ್ವಹಿಸಲಿದೆ ಎಂದು ಭಾರತೀಯ ಜನತಾ ಪಕ್ಷದ ರಾಜ್ಯ ಎಸ್.ಸಿ. ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಡ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ ಮತ್ತು ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ ಎಂದು ಮೆಚ್ಚುಗೆ ಸೂಚಿಸಿದರು. ಅನುದಾನವು ಪ್ರತಿವರ್ಷ ಶೇ. ೫ರಷ್ಟು ಹೆಚ್ಚಳವಾಗಲಿದೆ. ಮುಂದಿನ ಐದು ವರ್ಷಗಳಲ್ಲಿ ನಾಲ್ಕು ಕೋಟಿಗೂ ಅಧಿಕ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಇದರಿಂದ ಪ್ರಯೋಜನವಾಗಲಿದ್ದು, ಸಾಮಾಜಿಕ ಸಮಾನತೆಯ ಕನಸು ನನಸಾಗಲು ಮಹೋನ್ನತ ಕೊಡುಗೆ ನೀಡಲಿದೆ. ೨೦೨೦-೨೧ರಲ್ಲಿ ಕರ್ನಾಟಕಕ್ಕೆ ರೂ. ೧೭೯.೩ ಕೋಟಿ, ಬಳಿಕ ಪ್ರತಿವರ್ಷ ಶೇ. ೫ರಷ್ಟು ಹೆಚ್ಚುತ್ತಾ ಹೋಗಿ ೨೦೨೫-೨೬ರಲ್ಲಿ ರೂ. ೩೧೪.೭೯ ಕೋಟಿ ರಾಜ್ಯಕ್ಕೆ ಸಿಗಲಿದೆ. ಒಟ್ಟು ೧,೫೭೮ ಕೋಟಿ ರೂಪಾಯಿ ರಾಜ್ಯಕ್ಕೆ ಹರಿದುಬರಲಿದೆ. ರಾಜ್ಯ ಸರಕಾರವು ಇದಕ್ಕೆ ಪೂರಕವಾಗಿ ಶೇ. ೪೦ರಷ್ಟು ಅನುದಾನ ಕೊಡಲಿದೆ ಎಂದರು.

ಕೇಂದ್ರ ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ನಿಧನ

ನವದೆಹಲಿ, ಜ. ೨: ಕೇಂದ್ರ ಸಚಿವ ಹಾಗೂ ರಾಜಸ್ಥಾನದ ಮಾಜಿ ಸಂಸದ, ಕಾಂಗ್ರೆಸ್ ನಾಯಕ ಬೂಟಾ ಸಿಂಗ್ ಅವರು ಶನಿವಾರ ನಿಧನರಾಗಿದ್ದಾರೆ. ಅವರಿಗೆ ೮೬ ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೂಟಾ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಸಿಂಗ್ ಅವರಿಗೆ ಪತ್ನಿ, ಇಬ್ಬರು ಗಂಡು ಮತ್ತು ಮಗಳು ಇದ್ದಾರೆ. ಅವರು ಲೋಕಸಭಾ ಚುನಾವಣೆಯಲ್ಲಿ ಎಂಟು ಬಾರಿ ಗೆದ್ದಿದ್ದರು. ಗೃಹ, ಕೃಷಿ, ರೈಲ್ವೆ ಮತ್ತು ಇತರ ಸಚಿವರಾಗಿ ಪ್ರಮುಖ ಖಾತೆಗಳನ್ನು ಹೊಂದಿದ್ದರು.

ರಾಜ್ಯದಲ್ಲಿ ಕೊರೊನಾ ಲಸಿಕೆ ನೀಡುವ ಡ್ರೆöÊರನ್ ಯಶಸ್ವಿ!

ಬೆಂಗಳೂರು, ಜ. ೨: ಕೊರೊನಾ ಲಸಿಕೆಯನ್ನು ಜನ ಸಾಮಾನ್ಯರಿಗೆ ವಿತರಣೆ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡುವ ಸಾಧ್ಯತೆಗಳು ದಟ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ದಿನದ ಲಸಿಕೆ ನೀಡಿಕೆಯ ಪೂರ್ವ ಪ್ರಯೋಗ ಡ್ರೈರನ್ ಯಶಸ್ವಿಯಾಗಿದೆ. ಈ ಮೂಲಕ ಸೋಂಕಿನ ಬಗ್ಗೆ ಇರುವ ಆತಂಕ ಸ್ವಲ್ಪಮಟ್ಟಿಗೆ ದೂರವಾಗಿದೆ. ಕೋವಿಡ್ ೧೯ ಸೋಂಕಿನ ರೂಪಾಂತರಗೊAಡ ಸೋಂಕು ಹರಡುತ್ತಿರುವ ಭೀತಿಯ ನಡುವೆ ಪೂರ್ವ ಪ್ರಯೋಗ ನಡೆಸಲಾಗಿದೆ. ಈ ಮಾದರಿಯಲ್ಲಿ ಮುಂಬರುವ ದಿನಗಳಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಅನುಷ್ಠಾನಗೊಳಿಸಲು ಇಂದಿನ ಪ್ರಯೋಗ ಪೂರಕವಾಗಿದೆ. ಕೇಂದ್ರ ಆರೋಗ್ಯ ಇಲಾಖೆಯ ಶಿಷ್ಟಾಚಾರದಂತೆ ರಾಜ್ಯದಲ್ಲಿ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ತೀವ್ರ ತರಬೇತಿ ಪಡೆದ ವೈದ್ಯಕೀಯ ಸಿಬ್ಬಂದಿ ಲಸಿಕೆ ನೀಡಿಕೆಯನ್ನು ಸಂಪನ್ಮಗೊಳಿಸಲಾಗಿದೆ.