ಕುಶಾಲನಗರ, ಜ. ೨: ಕ್ಷÄಲ್ಲಕ ಕಾರಣದ ನೆಪವೊಡ್ಡಿ ಕುಶಾಲನಗರದಲ್ಲಿ ಪತ್ರಕರ್ತರೊಬ್ಬರ ಮೇಲೆ ತೀವ್ರ ಹಲ್ಲೆ ನಡೆಸಿದ ಪ್ರಕರಣ ನಡೆದಿದೆ. ರಾಜ್ಯಮಟ್ಟದ ಪತ್ರಿಕೆಯೊಂದರ ಜಿಲ್ಲಾ ವರದಿಗಾರರಾದ ಸುನೀಲ್ ಪೊನ್ನೆಟ್ಟಿ ಮಾರುಕಟ್ಟೆ ರಸ್ತೆಯಲ್ಲಿ ತಮ್ಮ ಕಾರಿನಲ್ಲಿ ಬರುತ್ತಿದ್ದ ಸಂದರ್ಭ ಅಪರಿಚಿತ ವ್ಯಕ್ತಿಯೊಬ್ಬ ಕಾರು ನಿಲ್ಲಿಸಿ ಬಾಗಿಲು ಎಳೆದು ಏಕಾಏಕಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ಸುನೀಲ್ ಕುಶಾಲನಗರ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಕರಣದ ಬಗ್ಗೆ ಕುಶಾಲನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಸಬ್ ಇನ್ಸ್ಪೆಕ್ಟರ್ ಗಣೇಶ್ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.