ಕೂಡಿಗೆ, ಜ. ೨: ಕುಶಾಲನಗರ ಹೋಬಳಿ ವ್ಯಾಪ್ತಿಯ ಗ್ರಾಮಗಳಿಗೆ ಶಾಸಕರ ಅನುದಾನ ಮತ್ತು ವಿವಿಧ ಪಾಕೇಜ್ ಯೋಜನೆಯ ಅಡಿಯಲ್ಲಿ ರೂ ೫ ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಅಪ್ಪಚ್ಚು ರಂಜನ್ ಭೂಮಿ ಪೂಜೆ ನೆರವೇರಿಸಿದರು ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಕ್ರೀಟ್ ರಸ್ತೆ ಮತ್ತು ಪರಿಶಿಷ್ಟ ಕಾಲೋನಿಗಳಿಗೆ ನೂತನ ರಸ್ತೆ, ಮತ್ತು ಡಾಂಬರೀಕರಣಗಳು ಕಾಮಗಾರಿಯ ಗುಣಮಟ್ಟವನ್ನು ಪರಿಶೀಲಿಸಿಕೊಂಡು ಉತ್ತಮವಾದ ರಸ್ತೆಯನ್ನು ನಿರ್ಮಾಣ ಮಾಡಿಸಿಕೊಳ್ಳಬೇಕು ಎಂದರು ಶಾಸಕ ರಂಜನ್ ತಿಳಿಸಿದರು.
ಗಣಗೂರು, ತೊರೆನೂರು, ಹೆಬ್ಬಾಲೆ, ಕೂಡಿಗೆ, ಕೂಡುಮಂಗಳೂರು, ಮುಳ್ಳುಸೋಗೆ, ಗುಡ್ಡೆಹೊಸೂರು ಸೇರಿದಂತೆ ಹಲವು ಕಡೆಗಳಲ್ಲಿ ಭೂಮಿ ಪೂಜೆ ಮಾಡಲಾಯಿತು.