ಕುಶಾಲನಗರ, ಜ. ೪: ಕುಶಾಲನಗರ ಬ್ಲಾಕ್ ವ್ಯಾಪ್ತಿಯಲ್ಲಿ ೧೦ ರಿಂದ ೧೨ ಗ್ರಾ.ಪಂ.ಗಳು ತಮ್ಮ ಪಕ್ಷದ ಅಭ್ಯರ್ಥಿಗಳು ವಿಜೇತರಾಗಿದ್ದಾರೆ ಎಂದು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್.ಅನಂತಕುಮಾರ್ ತಿಳಿಸಿದರು. ಅವರು ಚುನಾವಣಾ ಮತ ಎಣಿಕೆ ಕೇಂದ್ರದಲ್ಲಿ ‘ಶಕ್ತಿ’ಯೊಂದಿಗೆ ಅಭಿಪ್ರಾಯ ವ್ಯಕ್ತಪಡಿಸಿದರು. ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಕೊನೆ ಗಳಿಗೆಯಲ್ಲಿ ಕಾಂಗ್ರೆಸ್ ಸೇರ್ಪಡೆ ಸಂದರ್ಭ ಜೆಡಿಎಸ್ ಅಭ್ಯರ್ಥಿಗಳಲ್ಲಿ ಉಂಟಾದ ಗೊಂದಲ ಕೂಡ ಹಿನ್ನಡೆಗೆ ಕಾರಣವಾಗಿರುವ ಸಾಧ್ಯತೆಯಿದೆ ಎಂದರಲ್ಲದೆ ಮುಂದಿನ ದಿನಗಳಲ್ಲಿ ಕುಶಾಲನಗರ ಬ್ಲಾಕ್ನಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಮತ್ತೆ ಮರುಕಳಿಸುವ ಭರವಸೆ ವ್ಯಕ್ತಪಡಿಸಿದರು.