ಗೋಣಿಕೊಪ್ಪಲು, ಜ.೪: ಹುದಿಕೇರಿ ಗ್ರಾಮ ಪಂಚಾಯ್ತಿಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಅಭೂತಪೂರ್ವ ಗೆಲುವು ಸಾಧಿಸಿದ ಹಿನೆÀ್ನಲೆಯಲ್ಲಿ ನಗರದಲ್ಲಿ ಮೆರವಣಿಗೆ ಸಾಗಿದ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ನೂತನ ಸದಸ್ಯರೊಂದಿಗೆ ವಿಜಯೋತ್ಸವ ಆಚರಿಸಿದರು.ಬಿಜೆಪಿ ಕೃಷಿ ಮೋರ್ಚದ ಅಧ್ಯಕ್ಷ ಕಟ್ಟೇರ ಈಶ್ವರ್, ಬಿಜೆಪಿ ತಾಲೂಕು ಅಧ್ಯಕ್ಷ ನೆಲ್ಲಿರ ಚಲನ್ ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಞಂಗಡ ಅರುಣ್ ಭೀಮಯ್ಯ, ಜಿಲ್ಲಾ ಉಪಾಧ್ಯಕ್ಷರಾದ ತೀತಿರ ಊರ್ಮಿಳಾ, ಜಿಲ್ಲಾ ಮಹಿಳಾ ಮೋರ್ಚ ಅಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ, ತಾಲೂಕು ಕಾರ್ಯದರ್ಶಿ ವಾಟೇರಿರ ಬೋಪಣ್ಣ, ಶಕ್ತಿ ಕೇಂದ್ರದ ಪ್ರಮುಖರಾದ ಅರುಣ್, ತಾಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಜ್ಜಿಕುಟ್ಟಿರ ಪ್ರವೀಣ್ ಮುಂತಾದವರು ಮಾತನಾಡಿದರು. ಗೆಲುವು ಸಾಧಿಸಿದ ೧೪ ಮಂದಿ ನೂತನ ಬಿಜೆಪಿ ಬೆಂಬಲಿತ ಸದಸ್ಯರು ಸೇರಿದಂತೆ ವಿವಿಧ ಮುಖಂಡರು ಕಾರ್ಯಕರ್ತರು ಮಹಾದೇವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.