ಗೋಣಿಕೊಪ್ಪ ವರದಿ, ಜ. ೩: ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿ ರಾಜ್ಯ ಸರ್ಕಾರದಿಂದ ನೇಮಕಗೊಂಡಿರುವ ಕಂಜಿತAಡ ಅನಿತ ದೇವಯ್ಯ ಅವರನ್ನು ಇಲ್ಲಿನ ಕಾವೇರಿ ಮಹಿಳಾ ಸಮಾಜದ ವತಿಯಿಂದ ಶುಕ್ರವಾರ ಸನ್ಮಾನಿಸಲಾಯಿತು.
ಮಹಿಳಾ ಸಮಾಜದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಮಾಜದ ಸದಸ್ಯೆಯಾಗಿ ಹುದ್ದೆಯಲ್ಲಿ ಉನ್ನತ ಸ್ಥಾನ ಅಲಂಕರಿಸಿರುವ ಅನಿತ ದೇವಯ್ಯ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲಾಯಿತು.
ಈ ಸಂದರ್ಭ ಕಾವೇರಿ ಮಹಿಳಾ ಸಮಾಜ ಅಧ್ಯಕ್ಷೆ ಕಟ್ಟೇರ ಉತ್ತರೆ ಅಪ್ಪಚ್ಚು, ಉಪಾಧ್ಯಕ್ಷೆ ಚಂಬಾAಡ ಮೀನಾ ಅಕ್ಕಮ್ಮ, ಕಾರ್ಯದರ್ಶಿ ಕೊಣಿಯಂಡ ಬೋಜಮ್ಮ ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.