ಶನಿವಾರಸಂತೆ, ಜ. ೩: ಪಟ್ಟಣದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಜ. ೧ ರಂದು ಶಾಲೆ ಆರಂಭದ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆ ಕುರಿತು ಕ್ಲಸ್ಟರ್ ಮಟ್ಟದ ಸರ್ಕಾರಿ ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಮುಖ್ಯ ಶಿಕ್ಷಕರ ಸಭೆ ನಡೆಯಿತು.

ಶಾಲೆಗಳು ಆರಂಭವಾಗುವ ಹಿನ್ನೆಲೆ ಈಗಾಗಲೇ ಶಾಲಾ ಆವರಣವನ್ನು ಸ್ಯಾನಿಟೈಸರ್ ಸಿಂಪಡಿಸಿ ಸ್ವಚ್ಛಗೊಳಿಸಲಾಗಿದ್ದು, ಸಿದ್ಧತೆ ಮಾಡಿಕೊಂಡಿರುವುದಾಗಿ ಶಾಲಾ ಮುಖ್ಯಸ್ಥರು ಸಭೆಯಲ್ಲಿ ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗಾಗಿ ವಿದ್ಯಾರ್ಥಿ ಮತ್ತು ಶಿಕ್ಷಕರ ಆರೋಗ್ಯ ಘಟಕ ಸ್ಥಾಪನೆ ಮಾಡುವ ಬಗ್ಗೆಯೂ ಸಭೆಯಲ್ಲಿ ನಿರ್ಧಾರ ಮಾಡಲಾಯಿತು.

ಬಿಆರ್ ಪಿ ಮಧು ಹಂಡ್ಲಿ ಕ್ಲಸ್ಟರ್ ಸಿಆರ್ ಪಿ ಮನೋಹರ್, ವಿವಿಧ ಶಾಲಾ ಮುಖ್ಯಸ್ಥರು, ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು.