ಬಿ.ಎಸ್. ಯಡಿಯೂರಪ್ಪ ಹೇಳಿಕೆ ಮಡಿಕೇರಿ, ರಿ. ೩: ಕಸ್ತೂರಿ ರಂಗನ್ ವರದಿಗೆ ರಾಜ್ಯ ಸರ್ಕಾರದ ವಿರೋಧವಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.

ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಕಾರ್ಯಾಕರಿಣಿ ಸಭೆಯಲ್ಲಿ ಈ ಬಗ್ಗೆ ಮಾತನಾಡಿರುವ ಬಿ.ಎಸ್ ಯಡಿಯೂರಪ್ಪ, ಪಶ್ಚಿಮಘಟ್ಟಗಳ ಸಂರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ವರದಿಯನ್ನು ರಾಜ್ಯ ಸರ್ಕಾರ ಕೂಡ ವಿರೋಧಿಸುತ್ತದೆ. ಯಾವುದೇ ಕಾರಣಕ್ಕೂ ಪಶ್ಚಿಮ ಘಟ್ಟದ ಜನರಿಗೆ ಮಾರಕವಾದ ವರದಿ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಸ್ಪಷ್ಟವಾಗಿ ತಿಳಿಸಿದ್ದಾರೆ.