ಕುಶಾಲನಗರ, ಜ. ೪: ಕುಶಾಲನಗರ ಪಟ್ಟಣ ಪಂಚಾಯ್ತಿ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ಹಲವು ದೂರುಗಳು ಬಂದ ಹಿನೆÀ್ನಲೆಯಲ್ಲಿ ಪಂಚಾಯ್ತಿ ಕಚೆÉÃರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಪಂಚಾಯ್ತಿ ಆಡಳಿತ ಮಂಡಳಿ ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ದೂರುಗಳು ಬಂದ ವಿಚಾರಗಳ ಸಂಬAಧ ಹಲವು ದಾಖಲೆಗಳನ್ನು ಪರಿಶೀಲಿಸಿ ಮಾಹಿತಿಗಳನ್ನು ಪಡೆದುಕೊಂಡರು. ಈ ಸಂದರ್ಭ ಅಧಿಕಾರಿಗಳು ಕಳೆದ ಕೆಲವು ವರ್ಷಗಳಿಂದ ಸಮರ್ಪಕವಾಗಿ ದಾಖಲೆಗಳನ್ನು ನಿರ್ವಹಣೆ ಮಾಡದಿರುವ ವಾಸ್ತವಾಂಶ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿತು. ಈ ಹಿನೆÀ್ನಲೆಯಲ್ಲಿ ಅವರು ಮುಖ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಂಚಾಯ್ತಿ ವ್ಯಾಪ್ತಿಯಲ್ಲಿ ಆಗಬೇಕಿರುವ ಪ್ರಮುಖ ಕಾರ್ಯಗಳು, ಸಮಸ್ಯೆಗಳ ಬಗ್ಗೆ ಸಭೆಯಲ್ಲಿದ್ದ ಜನಪ್ರತಿನಿಧಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಸಭೆಯ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಗಳು ಕುಶಾಲನಗರ ಪಟ್ಟಣ ಪಂಚಾಯ್ತಿಯಲ್ಲಿ ಹಲವು ಸಮಸ್ಯೆಗಳ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಆಸ್ತಿ ತೆರಿಗೆ, ಇ ಸ್ವತ್ತು ದಾಖಲಾತಿಗಳ ಸಮರ್ಪಕವಾಗಿ ದಾಖಲೆಗಳು ನಿರ್ವಹಣೆಯಾಗದಿರುವ ಬಗ್ಗೆ ಕಂಡುಬAದಿದೆ. ಅನಧಿಕೃತ ಬಡಾವಣೆಗಳು ನಿರ್ಮಾಣಗೊಂಡಿರುವ ಬಗ್ಗೆ ತಿಳಿದುಬಂದಿದ್ದು ಈ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ. ಜನವರಿ ೩೦ ರ ಒಳಗಾಗಿ ಅಗತ್ಯ ದಾಖಲು ಪಟ್ಟಿಗಳನ್ನು ಸಿದ್ಧಪಡಿಸಿ ಸಮರ್ಪಕವಾಗಿ ದಾಖಲಾತಿಗಳ ನಿರ್ವಹಣೆಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಘನ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಲು ಈಗಾಗಲೇ ೩ ಕೋಟಿ ರೂ.ಗಳ ಯೋಜನೆ ಸಿದ್ಧಪಡಿಸಲಾಗಿದೆ. ದಕ್ಷಿಣ ಕನ್ನಡ ಸಮೀಪ ಕುಂದಾಪುರದಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕದ ಮಾದರಿ ಸ್ಥಾಪನೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು, ಪೌರಕಾರ್ಮಿಕರ ತಂಡ ಅಲ್ಲಿಗೆ ತೆರಳಿ ಪರಿಶೀಲಿಸಿ ಮಾಹಿತಿ ಪಡೆದುಕೊಂಡು ಅದರಂತೆ ಕುಶಾಲನಗರದಲ್ಲಿ ನಿರ್ಮಿಸಲು ಮುಂದಾಗಲು ಸೂಚಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳ ಅನುದಾನ ಸಮರ್ಪಕ ಬಳಕೆಗೆ ಸೂಚನೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಕುಶಾಲನಗರ ಪಟ್ಟಣ ಪಂಚಾಯ್ತಿ ಯಲ್ಲಿ ತಾಂಡವವಾಡುತ್ತಿರುವ ಲಂಚಗುಳಿತನ, ಮಧÀ್ಯವರ್ತಿಗಳ ಹಾವಳಿ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಮರ್ಪಕ ದಾಖಲಾತಿ ಅಥವಾ ಮಾಹಿತಿ ನೀಡಿದಲ್ಲಿ ಅಂತಹ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಈ ಸಂದರ್ಭ ಮಾತನಾಡಿದ ಕುಶಾಲನಗರ ಪ.ಪಂ. ಅಧ್ಯಕ್ಷ ಜೈವರ್ಧನ್, ಪಂಚಾಯ್ತಿಯ ಸಮಸ್ಯೆಗಳ ಬಗ್ಗೆ ಪರಿಶೀಲಿಸಿದ ಜಿಲ್ಲಾಧಿಕಾರಿ ಆಗಿಂದಾಗ್ಗೆ ಕಚೆÉÃರಿಯ ಬಗ್ಗೆ ಗಮನಹರಿಸಲು ಯೋಜನಾ ನಿರ್ದೇಶಕರಿಗೆ ಸೂಚಿಸಿದ್ದಾರೆ. ಈ ಹಿಂದೆ ಕ್ಷೇತ್ರ ಶಾಸಕ ಅಪ್ಪಚ್ಚರಂಜನ್ ಕೂಡ ಕಚೆÉÃರಿಯಲ್ಲಿ ಕೆಲವು ಅಧಿಕಾರಿ, ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದರು. ನಾಗರಿಕರ ದೂರಿನ ಹಿನೆÀ್ನಲೆಯಲ್ಲಿ ಈ ಹಿಂದೆ ಎರಡು ಬಾರಿ ಅಧಿಕಾರಿ ಸಿಬ್ಬಂದಿಗಳ ಸಭೆ ಕರೆದು ನಾಗರಿಕರಿಗೆ ಉತ್ತಮ ಸೇವೆ ನೀಡುವಂತೆ ಸೂಚನೆ ನೀಡಲಾಗಿತ್ತು. ಹಲವು ಸಮಸ್ಯೆಗಳ ನಿವಾರಣೆಗೆ ಪಂಚಾಯ್ತಿ ಆಡಳಿತ ಮಂಡಳಿ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲಾಗುವುದು ಎಂದರು. ಈ ಸಂದರ್ಭ ಪಪಂ ಉಪಾಧ್ಯಕ್ಷೆ ಸುರಯ್ಯಭಾನು ಸೇರಿದಂತೆ ಸದಸ್ಯರು ಇದ್ದರು.
ಜಿಲ್ಲಾಧಿಕಾರಿಗಳಿಂದ ಶಾಲೆ ಪರಿಶೀಲನೆ
ಕುಶಾಲನಗರ ಸರಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಶಿಥಿಲಾವಸ್ಥೆಯಲ್ಲಿರುವ ಸಭಾಂಗಣವನ್ನು ವೀಕ್ಷಿಸಿದರು.
ಶತಮಾನಗಳ ಇತಿಹಾಸವಿರುವ ಶಾಲೆಯ ಸಭಾಂಗಣ ಸಧ್ಯಕ್ಕೆ ಶಿಥಿಲಗೊಂಡಿದ್ದು ಮುಚ್ಚಿದ ಸ್ಥಿತಿಯಲ್ಲಿದೆ. ಕೂಡಲೇ ಇದನ್ನು ನವೀಕರಣಗೊಳಿಸಿ ಬಳಕೆಗೆ ಒದಗಿಸಿಕೊಡಲು ಅನುದಾನ ಕಲ್ಪಿಸುವಂತೆ ಶಾಲಾ ಮುಖ್ಯ ಶಿಕ್ಷಕಿ ರಾಣಿ ಮತ್ತು ಕುಶಾಲನಗರ ಪಪಂ ಅಧ್ಯಕ್ಷ ಜೈವರ್ಧನ್ ಮನವಿ ಸಲ್ಲಿಸಿದರು.
ಸಭಾಂಗಣದ ಒಳಕ್ಕೆ ತೆರಳಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ಪ.ಪಂ. ಮೂಲಕ ಅಗತ್ಯ ಕಾಮಗಾರಿ ಯೋಜನಾ ಪಟ್ಟಿ ಸಿದ್ದಪಡಿಸಿ ಸಲ್ಲಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭ ಸುದ್ದಿಗಾರ ರೊಂದಿಗೆ ಮಾತನಾಡಿದ ಪ.ಪಂ. ಅಧ್ಯಕ್ಷ ಜೈವರ್ಧನ್, ಹಲವು ಗಣ್ಯ ವಕ್ತಿಗಳನ್ನು ರೂಪಿಸಿದ ಶಾಲೆಯ ಉನ್ನತೀಕರಣಕ್ಕೆ ಕಾಳಜಿ ವಹಿಸುವ ಅಗತ್ಯವಿದೆ. ಈಗಾಗಲೆ ಪಂಚಾಯ್ತಿ ಮೂಲಕ ಕೊಳವೆ ಬಾವಿ ಕೊರೆದು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಥಿಲವಾಗಿರುವ ಸಭಾಂಗಣವನ್ನು ಪರಿಶೀಲಿಸಿ ಮೇಲ್ಛಾವಣಿಗೆ ಬದಲಾವಣೆಗೊಳಿಸಲು ಯೋಜನಾ ವರದಿ ಸಿದ್ಧಪಡಿಸಲು ಪಂಚಾಯ್ತಿ ಅಭಿಯಂತರರಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭ ಪ.ಪಂ. ಉಪಾಧ್ಯಕ್ಷೆ ಸುರಯ್ಯಭಾನು, ಮುಖ್ಯಾಧಿಕಾರಿ ಸುಜಯ್‌ಕುಮಾರ್, ಅಭಿಯಂತರೆ ಶ್ರೀದೇವಿ ಸೇರಿದಂತೆ ಶಾಲಾ ಶಿಕ್ಷಕ ವೃಂದದವರು ಇದ್ದರು.