ಸೋಮವಾರಪೇಟೆ, ಜ. ೩: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗನಳ್ಳಿ ಗ್ರಾಮದ ಬೈರೇಶ್ವರ ಸಮಿತಿ ವತಿಯಿಂದ ನಿವೃತ್ತ ಸೈನಿಕ ಎಸ್.ಎಂ. ಸುಬ್ರಮಣ್ಯ ಅವರನ್ನು ಸನ್ಮಾನಿಸಲಾಯಿತು. ಸಮಿತಿಯ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತೀಯ ಸೇನೆಯಲ್ಲಿ ೩೦ ವರ್ಷಗಳ ಕಾಲ ಸೇವೆ ಸಲ್ಲಿಸಿ ಇತ್ತೀಚೆಗೆ ನಿವೃತ್ತರಾದ ಸುಬ್ರಮಣ್ಯ ಅವರನ್ನು ಸಮಿತಿಯ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಪದಾಧಿಕಾರಿಗಳು, ಗ್ರಾಮಸ್ಥರು ಸನ್ಮಾನಿಸಿದರು.