ಮಡಿಕೇರಿ, ಜ. ೫: ಭಾ.ಕೃ.ಅ.ಪ. ಭಾರತೀಯ ಸಂಬಾರ ಬೆಳೆಗಳ ಸಂಶೋಧನಾ ಸಂಸ್ಥೆ ಪ್ರಾದೇಶಿಕ ಕೇಂದ್ರ ಅಪ್ಪಂಗಳದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಸಹ ೧೫ ದಿನಗಳ ಸ್ವಚ್ಛತಾ ಪಕ್ವಡವನ್ನು ತಾ. ೧೬ ರಿಂದ ೩೧ ರವರೆಗೆ ಹಮ್ಮಿಕೊಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ೧೫ ದಿನಗಳ ಕಾರ್ಯಕ್ರಮದಲ್ಲಿ ತಾ. ೨೩ ರಂದು ಪಾಲೂರಿನಲ್ಲಿ ರೈತ ದಿನಾಚರಣೆ ಆಚರಿಸಲಾಯಿತು, ತಾ. ೨೫ ರಂದು ರಾಜಾಸೀಟಿನ ಒಳ ಮತ್ತು ಹೊರ ಆವರಣದಲ್ಲಿ ಪ್ಲಾಸ್ಟಿಕ್ ಹಾಗೂ ಇನ್ನಿತರೆ ತ್ಯಾಜ್ಯ ವಸ್ತುಗಳನ್ನು ತೆಗೆಯುವ ಮೂಲಕ ಪ್ರವಾಸಿಗರಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಾಯಿತು. ಪ್ರಾದೇಶಿಕ ಕೇಂದ್ರದ ಸಿಬ್ಬಂದಿಗೆ ಪ್ರಬಂಧ ಸ್ಪರ್ಧೆಯನ್ನು ಮತ್ತು ಸಿಬ್ಬಂದಿಯ ಮಕ್ಕಳಿಗೆ ಚಿತ್ರಕಲೆ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಅರವತ್ತೊಕ್ಲು, ಅಪ್ಪಂಗಳ ಮತ್ತು ಬೆಟ್ಟಗೇರಿಯ ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲಾಯಿತು.