ಬೆಂಗಳೂರು, ಜ. ೬: ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಅರಣ್ಯ ಪ್ರದೇಶದ ಅಂಚಿನಲ್ಲಿ ತಡೆಗೋಡೆ ಹಾಗೂ ಹೊಂಡಗಳನ್ನು ನಿರ್ಮಿಸ ಲಾಗುವುದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಂಗಳವಾರ ಕೊಡಗು ಮಾನವ-ವನ್ಯಜೀವಿ ಸಂಘರ್ಷ ಉಪಶಮನ ಪ್ರತಿಷ್ಠಾನದ ಆಡಳಿತ ಮಂಡಳಿಯ ಸಭೆ ನಡೆಸಿ, ಅಧಿಕಾರಿ ಗಳು ಹಾಗೂ ಜಿಲ್ಲೆಯ ಶಾಸಕ ರೊಂದಿಗೆ ಸಮಾಲೋಚನೆ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಕೃಷಿಕರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ಆನಂದ್ ಸಿಂಗ್ ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮಂಗಳವಾರ ಕೊಡಗು ಮಾನವ-ವನ್ಯಜೀವಿ ಸಂಘರ್ಷ ಉಪಶಮನ ಪ್ರತಿಷ್ಠಾನದ ಆಡಳಿತ ಮಂಡಳಿಯ ಸಭೆ ನಡೆಸಿ, ಅಧಿಕಾರಿ ಗಳು ಹಾಗೂ ಜಿಲ್ಲೆಯ ಶಾಸಕ ರೊಂದಿಗೆ ಸಮಾಲೋಚನೆ ಮಾಡಿದರು.
ಕೊಡಗು ಜಿಲ್ಲೆಯಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಇದರಿಂದ ಬೆಳೆ ಹಾನಿಯಾಗಿದ್ದು, ಕೃಷಿಕರಿಗೆ ಸಮಸ್ಯೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾಡು ಪ್ರಾಣಿಗಳು ತಾಣಗಳು ಹೆಚ್ಚಾಗಿರುವುದರಿಂದ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಹೀಗಾಗಿ ಪ್ರವಾಸಿ ತಾಣಗಳಲ್ಲಿ ಸ್ವಚ್ಛತೆ ಕಾಪಾಡು ವುದು ಮುಖ್ಯವಾಗಿದೆ. ಆ ಭಾಗಗಳಲ್ಲಿ ಸಾರ್ವಜನಿಕ (ಮೊದಲ ಪುಟದಿಂದ) ಶೌಚಾಲಯಗಳನ್ನು ಸ್ವಚ್ಛವಾಗಿ ಇಡುವಂತೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಅಭಿವೃದ್ಧಿ ಕಾರ್ಯಗಳು ಎಂದಿಗೂ ಸುಸ್ಥಿರ ವಾಗಿರಬೇಕು. ಪ್ರವಾಸಿ ತಾಣಗಳಲ್ಲಿ ಸೇತುವೆಗಳ ಅಭಿವೃದ್ಧಿಯಾಗಬೇಕು. ಮರದ ಅಥವಾ ಕಬ್ಬಿಣದ ಸೇತುವೆಗಳಿಂದ ಅಪಾಯ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಕಾಂಕ್ರಿಟ್ ಸೇತುವೆಗಳನ್ನು ನಿರ್ಮಾಣ ಮಾಡಬೇಕು. ಪ್ರವಾಸಿ ತಾಣಗಳ ಅಭಿವೃದ್ಧಿ ವಿಚಾರದಲ್ಲಿ ಅಚ್ಟುಕಟ್ಟಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಣಿಗಳ ಸೆರೆಗೆ ನೆಟ್ ಬಳಕೆ: ಕಾಡು ಪ್ರಾಣಿಗಳನ್ನು ಸೆರೆ ಹಿಡಿಯುವಾಗ ಅವುಗಳಿಗೆ ಗಾಯಗಳಾಗದಂತೆ ಫೈಬರ್ ಗೇಜ್ ಹಾಗೂ ನೆಟ್ಗಳನ್ನು ಬಳಸಬೇಕು. ಆಕಸ್ಮಿಕವಾಗಿ ಗಾಯಗಳಾದಲ್ಲಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಅವುಗಳನ್ನು ರಕ್ಷಣೆ ಮಾಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ಗೋಗಿ, ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜಯ್ ಮೋಹನ್, ಉಪ ಸಂರಕ್ಷಣಾ ಅಧಿಕಾರಿ ಪ್ರಭಾಕರನ್ ಹಾಗೂ ಅಧಿಕಾರಿಗಳು ಹಾಜರಿದ್ದರು.
-ಬಿ.ಜಿ. ರವಿಕುಮಾರ್