ಚೆಟ್ಟಳ್ಳಿ, ಜ. ೬: ಸಂಕಷ್ಟದಲ್ಲಿರುವವರಿಗೆ ಸ್ಪಂದಿಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಕೆಎಂಸಿಸಿ ಸಂಘಟನೆಯ ಸದಸ್ಯತ್ವ ಅಭಿಯಾನಕ್ಕೆ ಅಖಿಲ ಭಾರತ ಕೆಎಂಸಿಸಿ ಸಂಘಟನೆಯ ಅಧ್ಯಕ್ಷ ನೌಶಾದ್ ಸಾಹಿಬ್ ಚಾಲನೆ ನೀಡಿದರು.

ವೀರಾಜಪೇಟೆ ವಲಯ ಕೆಎಂಸಿಸಿ ಸಂಘಟನೆಯ ವಲಯ ಕಚೇರಿಯಲ್ಲಿ ಸದಸ್ಯತ್ವ ಪಡೆದವರಿಗೆ ಪತ್ರ ವಿತರಿಸಿ ಮಾತನಾಡಿ ಸಂಘಟನೆ ನಿರಂತರ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದು, ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ಮೂಲಕ ಆರೋಗ್ಯ ಕಾಳಜಿಯೊಂದಿಗೆ ಸಂತ್ರಸ್ತರ ಸಮಸ್ಯೆಗಳಿಗೆ ನೆರವಾಗುತ್ತಿದೆ ಎಂದರು. ಪ್ರವಾಹ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರಿಗೆ ಬೇಕಾದ ಕಿಟ್ ಗಳನ್ನು ವಿತರಿಸುವ ಮೂಲಕ ಕೊಂಡAಗೇರಿ ಭಾಗದಲ್ಲಿ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ ಮಾಡಿಕೊಡಲಾಗಿದೆ. ತಿತಿಮತಿ ಭಾಗದ ಸಂತ್ರಸ್ತ ಕುಟುಂಬಕ್ಕೆ ಮನೆ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು ಸದ್ಯದಲ್ಲೇ ಪೂರ್ಣಗೊಳ್ಳಲಿದೆ ಎಂದರು. ಅಬ್ದುಲ್ಲಾ ಮುಸ್ಲಿಯಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೀರಾಜಪೇಟೆ ವಲಯ ಸಂಚಾಲಕ ಸಿ.ಹೆಚ್. ರಫೀಕ್ ಸೇರಿದಂತೆ ಸಂಘಟನೆ ಪದಾಧಿಕಾರಿಗಳು ಉಪಸ್ಥಿತರಿದ್ದರು.