ಮಡಿಕೇರಿ ಜ. ೬: ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಪೂರ್ವಾಭ್ಯಾಸ (ಅಣಕು) ತಾ. ೮ ರಂದು ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ವೈದ್ಯಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್ ಲಸಿಕೆಯ (ಮೊದಲ ಪುಟದಿಂದ) ಪೂರ್ವಾಭ್ಯಾಸ ಸಂಬAಧ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯ ಮಾಹಿತಿ ನೀಡುವುದು. ಹಾಗೆಯೇ ತಾಲೂಕು ಮಟ್ಟದಲ್ಲಿ ನಡೆಯುವ ಕೋವಿಡ್ ಲಸಿಕೆಯ ಅಣಕು ಪೂರ್ವಾಭ್ಯಾಸ ಸಂಬAಧ ತಹಶೀಲ್ದಾರರ ಜೊತೆ ಸಮನ್ವಯತೆ ಸಾಧಿಸಿ ಲಸಿಕೆ ಅಣಕು ಪ್ರಯೋಗವನ್ನು ಯಶಸ್ವಿಗೊಳಿಸಲು ಕ್ರಮ ಕೈಗೊಳ್ಳುವಂತೆ ಅನೀಸ್ ಕಣ್ಮಣಿ ಜಾಯ್ ತಿಳಿಸಿದರು.

ಕೋವಿಡ್ ಲಸಿಕೆಯ ಪೂರ್ವಾಭ್ಯಾಸ ಸಂಬAಧ ಯಾವುದೇ ರೀತಿಯ ಗೊಂದಲಕ್ಕೆ ಅವಕಾಶ ನೀಡಬಾರದು. ಆ ನಿಟ್ಟಿನಲ್ಲಿ ಅಗತ್ಯ ಸಿದ್ಧತಾ ಕಾರ್ಯಗಳನ್ನು ಕೈಗೊಳ್ಳು ವಂತೆ ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್ ಅವರು ನಗರದ ಜಿಲ್ಲಾ ಆಸ್ಪತ್ರೆ, ಕುಶಾಲನಗರದ ಸಮುದಾಯ ಆರೋಗ್ಯ ಕೇಂದ್ರ ಮತ್ತು ವೀರಾಜಪೇಟೆ ತಾಲೂಕಿನ ಕಾಕೋಟುಪರಂಬು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆಯ

ಅಣಕು ಕಾರ್ಯಕ್ರಮ ನಡೆಯಲಿದ್ದು, ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಗೋಪಿನಾಥ್, ಡಾ. ಮಹೇಶ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಸುಧೀರ್ ನಾಯಕ್ ಹಾಗೂ ಇನ್ನಿತರರಿದ್ದರು.