ಮಡಿಕೇರಿ, ಜ. ೬: ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ನ್ಯಾಯಾಲಯದ ಕಲಾಪಗಳಿಗೆ ಆಗಮಿಸುವವರನ್ನು ಕೊರೊನಾ ಪರೀಕ್ಷೆಗೆ ಒಳಪಡಿಸುವ ಕಾರ್ಯ ನಡೆಯುತ್ತಿದ್ದು, ಆಗಮಿಸುವ ಪ್ರತಿಯೊಬ್ಬರಿಗೂ ಕೂಡ ಪರೀಕ್ಷೆ ಮಾಡಲಾಗುತ್ತಿದೆ.

ಆದರೆ ಗಂಟಲು ದ್ರವವನ್ನು ತೆಗೆದು ಪರೀಕ್ಷಿಸುವ ನಿಟ್ಟಿನಲ್ಲಿ ಕೇವಲ ಒಂದು ತಪಾಸಣಾ ಕೇಂದ್ರವನ್ನು ಮಾತ್ರ ನ್ಯಾಯಾಲಯದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದ್ದು, ಇದರಿಂದಾಗಿ ನೂರಾರು ಸಂಖ್ಯೆಯಲ್ಲಿ ಆಗಮಿಸುವ ಮಂದಿ ಗಂಟೆಗಟ್ಟಲೆ ಕಾದು ನಿಲ್ಲಬೇಕಾದ ಅನಿವಾರ್ಯತೆ ಎದುರಾಗಿದೆ. ತಮ್ಮ ಪ್ರಕರಣಗಳ ಸಂಬAಧ ನ್ಯಾಯಾಲಯ ನೀಡಿದ ಸಮಯಕ್ಕನುಗುಣವಾಗಿ ಪಾಲ್ಗೊಳ್ಳಲು ಬರುವ ಜನತೆ ಕೊರೊನಾ ಪರೀಕ್ಷಾ ವಿಳಂಬದಿAದಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಬಗ್ಗೆ ‘ಶಕ್ತಿ’ಯೊಂದಿಗೆ ಮಾತನಾಡಿದ ಕೊಡಗು ಏಕೀಕರಣ ರಂಗದ ಪ್ರಮುಖ ತಮ್ಮು ಪೂವಯ್ಯ ನ್ಯಾಯಾಲಯದ ಆವರಣದಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಕೊರೊನಾ ತಪಾಸಣಾ ಕೇಂದ್ರವನ್ನು ತೆರೆಯುವ ಮೂಲಕ ಜನತೆ ಗಂಟೆಗಟ್ಟಲೆ ಕಾಯುವುದನ್ನು ತಪ್ಪಿಸಬಹುದಾಗಿದೆ.

ಈ ದಿಸೆಯಲ್ಲಿ ಸಂಬAಧಿಸಿದವರು ಗಮನ ಹರಿಸುವಂತೆ ಮನವಿ ಮಾಡಿದ್ದಾರೆ. ಇದೇ ವಿಚಾರವಾಗಿ ಹಲವು ನಾಗರಿಕರು ‘ಶಕ್ತಿ’ಯೊಂದಿಗೆ ಮಾತನಾಡಿದ್ದು, ಹೆಚ್ಚೆಚ್ಚು ಜನರು ಸಾಲುಗಟ್ಟಿ ನಿಲ್ಲುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಸ್ಯೆಯಾಗಲಿದ್ದು, ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಹೆಚ್ಚುವರಿಯಾಗಿ ಮತ್ತೊಂದು ಪರೀಕ್ಷಾ ಕೇಂದ್ರವನ್ನು ನ್ಯಾಯಾಲಯದ ಆವರಣದಲ್ಲಿ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ.

ಡಿಹೆಚ್‌ಓ ಪ್ರತಿಕ್ರಿಯೆ

ನ್ಯಾಯಾಲಯದ ನಿರ್ದೇಶನದಂತೆ ನ್ಯಾಯಾಲಯದ ಆವರಣದಲ್ಲಿ ಒಂದು ಕೊರೊನಾ ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ. ಸಮನ್ಸ್ ಆಧಾರದಲ್ಲಿ ನ್ಯಾಯಾಲಯಕ್ಕೆ ತೆರಳುವ ಮಂದಿ ಅಲ್ಲಿ ತುರ್ತಾಗಿ ಪರೀಕ್ಷೆ ಸಾಧ್ಯವಾಗದಿದ್ದರೆ ಸರ್ಕಾರಿ ಆಸ್ಪತ್ರೆಯಲ್ಲಿ ಸಮನ್ಸ್ ತೋರಿಸಿ ಪರೀಕ್ಷೆ ಮಾಡಿಸಿಕೊಳ್ಳಬಹುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮೋಹನ್ ತಿಳಿಸಿದ್ದಾರೆ.