ಮಡಿಕೇರಿ, ಜ. ೬: ಜಿಲ್ಲಾ ಕೇಂದ್ರ ಸ್ಥಾನ ಮಡಿಕೇರಿ ನಗರದ ಅಭಿವೃದ್ಧಿಗೆ ಅಗತ್ಯವಿರುವಷ್ಟು ಅನುದಾನ ತರುವಲ್ಲಿ ಜಿಲ್ಲೆಯ ಶಾಸಕರುಗಳು ವಿಫಲರಾಗಿದ್ದಾರೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಆರೋಪಿಸಿದ್ದಾರೆ. ಶಾಸಕರುಗಳಿಂದ ಅನುದಾನ ತರಲು ಸಾಧ್ಯವಾಗದಿದ್ದಲ್ಲಿ ಮಾಜಿ ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಹಕಾರದೊಂದಿಗೆ ಸರ್ಕಾರದ ಬಳಿ ತೆರಳಿ ನಾವೇ ಅನುದಾನ ತರುತ್ತೇವೆ ಎಂದು ಅವರು ತಿಳಿಸಿದ್ದಾರೆ.
ನಗರಸಭಾ ಪೌರಾಯುಕ್ತ ರಾಮದಾಸ್ ಅವರೊಂದಿಗೆ ನಗರದ ವಿವಿಧ ಬಡಾವಣೆಗಳಿಗೆ ತೆರಳಿದ ಗಣೇಶ್, ರಸ್ತೆ ಮತ್ತು ಚರಂಡಿಗಳ ಅವ್ಯವಸ್ಥೆ ಬಗ್ಗೆ ವಿವರಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೌರಾಯುಕ್ತರು ಸಿದ್ಧಪಡಿಸುವ ಅಭಿವೃದ್ಧಿ ಕಾರ್ಯಗಳ ಕ್ರಿಯಾ ಯೋಜನೆಯೊಂದಿಗೆ ಸರ್ಕಾರದ ಬಳಿ ತೆರಳಿ ಕುಮಾರಸ್ವಾಮಿ ಅವರ ಶಿಫಾರಸ್ಸು ಪಡೆದು ಅನುದಾನ ಬಿಡುಗಡೆಗೆ ಮುಂದಾಗುವುದಾಗಿ ಹೇಳಿದರು. ನಗರದ ಹಲವು ವಾರ್ಡ್ಗಳಲ್ಲಿ ರಸ್ತೆ, ಚರಂಡಿ ಮತ್ತು ತಡೆಗೋಡೆ ನಿರ್ಮಾಣ ಕಾರ್ಯ ನಡೆಯ ಬೇಕಾಗಿದೆ. ಇನ್ನು ನಾಲ್ಕೆöÊದು ತಿಂಗಳಿನಲ್ಲಿ ಮತ್ತೆ ಮಳೆಗಾಲ ಆರಂಭವಾದರೆ ಯಾವುದೇ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಕ್ಷಣ ಶಾಸಕರುಗಳು ಬಡಾವಣೆಗಳಿಗೆ ಭೇಟಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ಕಳೆದ ಎರಡು ವರ್ಷಗಳಿಂದ ನಗರದ ಪ್ರಮುಖ ಬಡಾವಣೆಗಳಲ್ಲಿ ರಸ್ತೆ ಹಾಗೂ ಒಳ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದೆ ನಿವಾಸಿಗಳು ಪರದಾಡುವಂತಾಗಿದೆ ಎಂದು ಕೆ.ಎಂ. ಗಣೇಶ್ ಗಮನ ಸೆಳೆದರು.
ಪೌರಾಯುಕ್ತ ರಾಮದಾಸ್ ಮಾತನಾಡಿ, ಈಗಾಗಲೇ ಹಲವು ಬಡಾವಣೆಗಳಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿ ಪೂರ್ಣಗೊಂಡಿದೆ. ಕಾರಣಾಂತರಗಳಿAದ ಕೆಲವು ಭಾಗಗಳಲ್ಲಿ ಕಾಮಗಾರಿ ಸ್ಥಗಿತ ಗೊಂಡಿದ್ದು, ಶೀಘ್ರ ಆರಂಭಿಸಲಾಗು ವುದು ಎಂದು ಭರವಸೆ ನೀಡಿದರು.
ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಸಿ. ಸುನೀಲ್, ಎಸ್ಸಿ ಘಟಕದ ಅಧ್ಯಕ್ಷ ರವಿಕುಮಾರ್, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ಪ್ರಮುಖರಾದ ಕೆ.ಜಿ. ಮದನ್, ಜಗದೀಶ್ ಮತ್ತಿತರರು ಈ ಸಂದರ್ಭ ಹಾಜರಿದ್ದರು.