ಕೂಡಿಗೆ, ಜ. ೬: ಕೂಡುಮಂಗಳೂರು ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ವಾಸಿಸುತ್ತಿರುವವರಿಗೆ ಶೀಘ್ರ ಹಕ್ಕುಪತ್ರಗಳನ್ನು ವಿತರಿಸಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭರವಸೆ ನೀಡಿದರು.
ಕೂಡುಮಂಗಳೂರು ಗ್ರಾಮದ ಮುಖ್ಯ ರಸ್ತೆಯ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಥಳೀಯರು ಕಾಲೋನಿಗೆ ಭೇಟಿ ನೀಡÀಬೇಕೆಂದು ಮನವಿ ಮಾಡಿದ ಮೇರೆಗೆ ಶಾಸಕರು ಕಾಲೋನಿಗೆ ತೆರಳಿ ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು. ಹಕ್ಕುಪತ್ರಕ್ಕೆ ಎಲ್ಲರೂ ಅರ್ಜಿ ಸಲ್ಲಿಸುವಂತೆ ತಿಳಿಸಿದರು. ಅಲ್ಲದೆ ಕುಡಿಯುವ ನೀರಿನ ಸರಬರಾಜು ವ್ಯವಸ್ಥೆಯನ್ನು ಸರಿಪಡಿಸಲು ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡಿದರು. ಸರಕಾರದಿಂದ ಬರುವ ವಿವಿಧÀ ಯೋಜನೆಯ ಮೂಲಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹೆಚ್ಚಿನ ಪ್ರಮಾಣದಲ್ಲಿ ಸೌಲಭ್ಯಗಳನ್ನು ಒದಗಿಸಲು ಅನುದಾನವಿದ್ದು, ಅದರ ಬಳಕೆಗೆ ಗ್ರಾಮ ಮಟ್ಟದಿಂದ ಪ್ರಯತ್ನ ನಡೆಯಬೇಕು. ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ಶೀಘ್ರವಾಗಿ ನಿರ್ಮಾಣ ಮಾಡಿಕೊಡಲಾಗುವುದು. ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಜನಪ್ರತಿನಿಧಿಗಳು ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಬೇಕೆAದು ಕರೆ ನೀಡಿದರು. ಜಿ.ಪಂ. ಸದಸ್ಯೆ ಮಂಜುಳಾ, ತಾ.ಪಂ. ಸದಸ್ಯ ಗಣೇಶ್, ಗ್ರಾ.ಪಂ. ಸದಸ್ಯರುಗಳಾದ ಕೆ.ಕೆ. ಭೋಗಪ್ಪ, ಭಾಸ್ಕರ್ ನಾಯಕ್, ಚಂದ್ರು, ಮಾಡ್ಲಿಗೌಡ, ಇಂದಿರಾ, ರಮೇಶ್, ಚೈತ್ರ, ಮಂಜುನಾಥ, ಕೂಡುಮಂಗಳೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಮಂಜುನಾಥ್, ಗುರು ಲಿಂಗಪ್ಪ, ಪ್ರಮೀಣ್ ಸೇರಿದಂತೆ ಇನ್ನಿತರರು ಇದ್ದರು.