ಶನಿವಾರಸAತೆ, ಜ. ೫: ಅಧ್ಯಾತ್ಮದಿಂದ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.

ಸಮೀಪದ ಮನೆಹಳ್ಳಿ ಗ್ರಾಮದಲ್ಲಿರುವ ತಪೋವನ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ಕಾರ್ತಿಕ ಪೂಜೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಸಮಾರಂಭ ಶನಿವಾರಸಂತೆ, ಜ. ೫: ಅಧ್ಯಾತ್ಮದಿಂದ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಅಭಿಪ್ರಾಯಪಟ್ಟರು.

ಸಮೀಪದ ಮನೆಹಳ್ಳಿ ಗ್ರಾಮದಲ್ಲಿರುವ ತಪೋವನ ಕ್ಷೇತ್ರ ಮನೆಹಳ್ಳಿ ಮಠದಲ್ಲಿ ಕಾರ್ತಿಕ ಪೂಜೋತ್ಸವದ ಅಂಗವಾಗಿ ಏರ್ಪಡಿಸಿದ್ದ ಧಾರ್ಮಿಕ ಸಮಾರಂಭ ಹೋಗುವುದರಿಂದ ಮನಸ್ಸಿಗೆ ನೆಮ್ಮದಿ ಕಾಣಬಹುದು ಎಂದರು.

ಕಾರ್ಯಕ್ರಮದಲ್ಲಿ ಮನೆಹಳ್ಳಿ ಮಠದ ನೂತನ ಕ್ಯಾಲೆಂಡರ್ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಮನೆಹಳ್ಳಿ ಮಠಾಧೀಶ ಮಹಾಂತ ಶಿವಲಿಂಗ ಸ್ವಾಮೀಜಿ, ಅರಮೇರಿ ಕಳಂಚೇರಿ ಮಠಾಧೀಶ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಶಿಡಿಗಳಲೆ ಮಠಾಧೀಶ ಇಮ್ಮಡಿ ಶಿವಲಿಂಗ ಸ್ವಾಮೀಜಿ, ತೊರೆನೂರು ಮಠಾಧೀಶ ಮಲ್ಲೇಶ ಸ್ವಾಮೀಜಿ, ದಿಂಡಗಾಡು ಮಠಾಧೀಶ ಅಪ್ಪಾಜಿ ಸ್ವಾಮೀಜಿ, ಕೊಡಗು ಜಿ.ಪಂ. ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್, ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಸೇರಿದಂತೆ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ತಿಕ ದೀಪೋತ್ಸವದ ಅಂಗವಾಗಿ ಭಕ್ತರು ಸಹಸ್ರಾರು ದೀಪಬೆಳಗಿದರು. ದೇವರ ಉತ್ಸವ ನಡೆಯಿತು, ಉತ್ಸವದಲ್ಲಿ ಪಾಲ್ಗೊಂಡಿದ್ದ ಸಹಸ್ರಾರು ಮಂದಿಗೆ ದಾಸೋಹ ಏರ್ಪಡಿಸಲಾಗಿತ್ತು.