ಮಡಿಕೇರಿ, ಜ. ೫: ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ಒಂದು ಲಕ್ಷ ಎಕರೆವರೆಗೆ ಒತ್ತುವರಿ ಆಗಿರುವ ಬಗ್ಗೆ ಮಾಹಿತಿ ಇದ್ದು, ಈ ಆಸ್ತಿಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಡಿಕೇರಿ, ಜ. ೫: ರಾಜ್ಯದಲ್ಲಿ ವಕ್ಫ್ ಬೋರ್ಡ್ ಆಸ್ತಿ ಒಂದು ಲಕ್ಷ ಎಕರೆವರೆಗೆ ಒತ್ತುವರಿ ಆಗಿರುವ ಬಗ್ಗೆ ಮಾಹಿತಿ ಇದ್ದು, ಈ ಆಸ್ತಿಗಳನ್ನು ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು (ಮೊದಲ ಪುಟದಿಂದ) ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವ (ಮೊದಲ ಪುಟದಿಂದ) ಕಾನೂನು, ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಖಂಡರ ಜೊತೆ ಸಭೆ ನಡೆಸಲಾಗಿದೆ. ಕೊಡ್ಲಿಪೇಟೆ, ಸೋಮವಾರಪೇಟೆ, ನಾಪೋಕ್ಲು ಹೀಗೆ ಜಿಲ್ಲೆಯ ಹಲವು ಭಾಗಗಳಿಂದ ಅಲ್ಪಸಂಖ್ಯಾತರ ಮುಖಂಡರನ್ನು ಆಹ್ವಾನಿಸಿ ಮುಖಂಡರ ಹಲವು ಸಲಹೆ, ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗಿದೆ ಎಂದರು.

ಸರ್ಕಾರ ಶಾಂತಿ ಸೌಹಾರ್ದತೆಗೆ ಆದ್ಯತೆ ನೀಡಿದೆ. ಅಲ್ಪಸಂಖ್ಯಾತರ ಪ್ರತಿನಿಧಿಗಳ ಜೊತೆ ಚರ್ಚಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕ್ರಮವಹಿಸಲಾಗಿದೆ. ಅಲ್ಪಸಂಖ್ಯಾತರ ಸಮಸ್ಯೆಗಳಿಗೆ ಸ್ಪಂದಿಸಿ, ಕಾಲ ಮಿತಿಯೊಳಗೆ ಪರಿಹರಿಸಲಾಗುವುದು ಎಂದರು.

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ, ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಗಮನ ಹರಿಸಲಾಗಿದೆ. ಆ ನಿಟ್ಟಿನಲ್ಲಿ ಕೋವಿಡ್-೧೯ ಲಸಿಕೆಯನ್ನು ಪ್ರತಿಯೊಬ್ಬರೂ ಸರ್ಕಾರದ ನಿರ್ದೇಶನದಂತೆ ಪಡೆಯುವಂತಾಗಬೇಕು. ಯಾವುದೇ ವದಂತಿಗಳಿಗೆ ಕಿವಿಗೊಡಬಾರದು ಎಂದು ಅಬ್ದುಲ್ ಅಜೀಮ್ ಮನವಿ ಮಾಡಿದರು.

ಸುದ್ದಿಗೋಷ್ಠಿಗೂ ಮೊದಲು ಅಲ್ಪಸಂಖ್ಯಾತರ ಮುಖಂಡರ ಪ್ರತಿನಿಧಿಗಳಿಂದ ಮಾಹಿತಿ ಪಡೆದರು. ಅಲ್ಪಸಂಖ್ಯಾತರ ಮುಖಂಡರಾದ ಜೋಚಿಮ್ ರೋಡ್ರಿಗಸ್ ಕೆ.ಎ. ಯಾಕೂಬ್, ಕೆ.ಟಿ. ಬೇಬಿ ಮ್ಯಾಥ್ಯೂ, ಜಾಮೀಯ ಮಸೀದಿ ಅಧ್ಯಕ್ಷರು ಸೇರಿದಂತೆ ಇನ್ನಿತರರು ಹಲವು ಮಾಹಿತಿ ನೀಡಿದರು.