ಬೆಂಗಳೂರು, ಜ. ೬: ಕೇರಳದ ಆಲಪ್ಪುಳ ಮತ್ತು ಕೊಟ್ಟಾಯಂ ಜಿಲ್ಲೆಗಳಲ್ಲಿ ಬಾತುಕೋಳಿಗಳಲ್ಲಿ ಕೋಳಿಶೀತ/ಹಕ್ಕಿಜ್ವರವು (ಊ೫ಓ೮) ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿಯೂ ರೋಗ ಕಾಣಿಸಿ ಕೊಳ್ಳುವ ಸಾಧ್ಯತೆಗಳಿರುವುದರಿಂದ ರೋಗೋದ್ರೇಕದ ನಿರ್ವಹಣೆಗೆ ಎಲ್ಲಾ ಜಿಲ್ಲೆಗಳಲ್ಲಿಯೂ ಕಟ್ಟೆಚ್ಚರದಿಂದ ಕೋಳಿಶೀತ ಜ್ವರದ ಸರ್ವೇಕ್ಷಣ ಕಾರ್ಯಕ್ರಮವನ್ನು ಪರಿಣಾಮಕಾರಿ ಯಾಗಿ ನಿರ್ವಹಣೆ ಮಾಡಲು ಸಿದ್ಧತೆ ಮಾಡಿಕೊಳ್ಳಿ ಎಂದು ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮತ್ತು ಪಶುವೈದ್ಯರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವ ಪ್ರಭು ಚವ್ಹಾಣ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇರಳ ರಾಜ್ಯಕ್ಕೆ ಹೊಂದಿ ಕೊಂಡಿರುವ ರಾಜ್ಯದ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಉಪನಿರ್ದೇಶಕರುಗಳು ಕೋಳಿ ಶೀತ ಜ್ವರದ ಸಂಭಾವ್ಯ ರೋಗೋದ್ರೇಕವನ್ನು ತಡೆಗಟ್ಟಲು ಜಿಲ್ಲಾಧಿಕಾರಿಗಳೊಂದಿಗೆ ಜಿಲ್ಲಾಮಟ್ಟದ ರೋಗ ನಿಯಂತ್ರಣ ಸಮಿತಿಯ ಸಭೆ ಜರುಗಿಸಿ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ಕಂಡುಬAದಿಲ್ಲ ಆದರೆ ಎಲ್ಲ ರೀತಿಯ ಎಚ್ಚರಿಕೆ ವಹಿಸಿ ರೋಗ ಲಕ್ಷಣ ಕಂಡುಬAದಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಕೇರಳ ರಾಜ್ಯದ ಗಡಿ ಭಾಗದಲ್ಲಿ ಕೂಡಲೇ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸಿ ಕೇರಳ ರಾಜ್ಯದಿಂದ ಕೋಳಿ / ಕುಕ್ಕುಟ ಹಾಗೂ ಕುಕ್ಕುಟ ಉತ್ಪನ್ನಗಳ ಸಾಗಾಣಿಕೆಯನ್ನು ನಿರ್ಬಂಧಿಸುವುದು ಹಾಗೂ, ಕೇರಳ ರಾಜ್ಯದಿಂದ ಒಳ ಬರುವ ಕೋಳಿ ಸಾಗಾಣಿಕೆ ವಾಹನಗಳನ್ನು ನೈರ್ಮಲ್ಯೀಕರಿಸಿ ಒಳಬಿಡಲು ಸೂಚನೆ ನೀಡಲಾಗಿದೆ. ಅಲ್ಲದೇ ತೆಗೆದುಕೊಂಡ ಕ್ರಮಗಳ ದೈನಂದಿನ ವರದಿಯನ್ನು ಉಪನಿರ್ದೇಶಕರು, ಕೋಳಿ ರೋಗ ನಿರ್ಣಯ ಪ್ರಯೋಗಾಲಯದ ಕಚೇರಿಗೆ ಸಲ್ಲಿಸಲು ತಿಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.